ಒಲೆಯ ಮೇಲೆ ಒಂದು ಪಾತ್ರೆಯನ್ನಿಟ್ಟು ಅದಕ್ಕೆ ತುಪ್ಪ ಹಾಕಿ ಬಿಸಿ ಮಾಡಿಕೊಳ್ಳಬೇಕು. ಇದಕ್ಕೆ ಕಡಲೆಹಿಟ್ಟು ಹಾಕಿ ಸಣ್ಣ ಉರಿಯಲ್ಲಿ ಕೆಂಪಗೆ ಹುರಿದುಕೊಳ್ಳಬೇಕು. ಕಡಲೆಹಿಟ್ಟು ಕಂದುಬಣ್ಣ ಬರುತ್ತಿದ್ದಂತೆ ಇದಗ್ಕೆ ಹಾಲು ಸೇರಿಸಿ ಉಂಡೆಗಳಾಗದಂತೆ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
ಹಾಲು ಚೆನ್ನಾಗಿ ಮಿಶ್ರಣವಾದ ಬಳಿಕ ಸಕ್ಕರೆ ಹಾಕಿ ಸುಮಾರು ಹತ್ತರಿಂದ ಹದಿನೈದಿ ನಿಮಿಷಗಳ ಕಾಲ ಕೈಯಾಡಿಸುತ್ತಾ ಇರಬೇಕು.
ಇದಕ್ಕೆ ಉಳಿದ ತುಪ್ಪ ಮತ್ತು ಕಾಯಿತುರಿ ಹಾಕಿ ಮಿಶ್ರಣ ಮಾಡಬೇಕು.
ನಂತರ ಈ ಮಿಶ್ರಣವನ್ನು ಸಣ್ಣ ಉರಿಯಲ್ಲಿ 10 ನಿಮಿಷಗಳ ಕಾಲ ಕೈಯಾಡಿಸಬೇಕು. ನಂತರ ತುಪ್ಪ ಸವರಿದ ತಟ್ಟೆಯೊಂದಕ್ಕೆ ಹಾಕಿ ಸುಮಾರು 1 ಗಂಟೆಗಳ ಕಾಲ ತಣ್ಣಗಾಗಲು ಬಿಡಬೇಕು. ತಣ್ಣಗಾದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿಕೊಂಡು ಬಾದಾಮಿ ಚೂರುಗಳಿಂದ ಅಲಂಕರಿಸಿದರೆ ಸ್ಪೆಷಲ್ ಬರ್ಫಿ ಸವಿಯಲು ಸಿದ್ಧವಾಗುತ್ತದೆ.