ಕೆಂಪು ಚಟ್ನಿ
ಕೆಂಪು ಚಟ್ನಿ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಕಡ್ಲೆ ಬೇಳೆ - 2 ಚಮಚ
- ಒಣಗಿದ ಕೆಂಪು ಮೆಣಸಿನ ಕಾಯಿ - 6-7
- ಚಿಕ್ಕದಾದ ಸಾಂಬಾರ್ ಈರುಳ್ಳಿ - 8-10
- ಬೆಳ್ಳುಳ್ಳಿ - 5-6 ಎಸಳು
- ಹುಣಸೆ ಹಣ್ಣು - ಸ್ವಲ್ಪ
- ತೆಂಗಿನ ತುರಿ - ಕಾಲು ಬಟ್ಟಲು
- ಉಪ್ಪು - ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
- ಒಲೆಯ ಮೇಲೆ ಬಾಣಲೆಯನ್ನು ಇಟ್ಟು ಕಡಲೆ ಬೇಳೆಯನ್ನು ಕೆಂಪಗೆ ಹುರಿದುಕೊಳ್ಳಬೇಕು.
- ನಂತರ ಕೆಂಪು ಮೆಣಸಿನ ಕಾರಿ, ಸಾಂಬಾರ್ ಈರುಳ್ಳಿ, ಬೆಳ್ಳುಳ್ಳಿ, ತೆಂಗಿನ ತುರಿಯನ್ನು ಸ್ವಲ್ಪ ಬೆಚ್ಚಗೆ ಮಾಡಿಕೊಳ್ಳಬೇಕು.
- ಮಿಕ್ಸಿ ಜಾರಿಗೆ ಹುರಿದಿಟ್ಟುಕೊಂಡ ಎಲ್ಲಾ ಪದಾರ್ಥವನ್ನು ಹಾಕಿ, ಜೊತೆಗೆ ಹುಣಸೆಹಣ್ಣು ಹಾಗೂ ಉಪ್ಪನ್ನು ಹಾಕಿ ನುಣ್ಣಗೆ ರುಬ್ಬಿಕೊಂಡರೆ ರುಚಿಕರವಾದ ಕೆಂಪು ಚಟ್ನಿ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.