ಕಲ್ಮಿ ವಡೆ
ರುಚಿಕರವಾದ ಕಲ್ಮಿ ವಡೆ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
- ಕಡಲೆಬೇಳೆ - ನೆನೆಸಿದ್ದು 1 ಬಟ್ಟಲು
- ಹಸಿಮೆಣಸಿನ ಕಾಯಿ - 4
- ಅಚ್ಚ ಖಾರದ ಪುಡಿ - ಅರ್ಧ ಚಮಚ
- ಜೀರಿಗೆ - ಅರ್ಧ ಚಮಚ
- ಉಪ್ಪು - ರುಚಿಗೆ ತಕ್ಕಷ್ಟು
- ಶುಂಠಿ, ಬೆಳ್ಳುಳ್ಳಿ ಪೇಸ್ಟ್ - 2 ಚಮಚ
- ಕರಿಬೇವು - ಕತ್ತರಿಸಿದ್ದು ಸ್ವಲ್ಪ
- ಕೊತ್ತಂಬರಿ ಸೊಪ್ಪು - ಸ್ವಲ್ಪ
- ಎಣ್ಣೆ - ಕರಿಯಲು
ಮಾಡುವ ವಿಧಾನ...
- ಮೊದಲು ಕಡಲೆಬೇಳೆಯನ್ನು ನುಣ್ಣಗೆ ರುಬ್ಬಿಕೊಳ್ಳಬೇಕು.
- ನಂತರ ಇದಕ್ಕೆ ಸಣ್ಣಗೆ ಹೆಚ್ಚಿದ ಹಸಿಮೆಣಸಿನ ಕಾಯಿ, ಖಾರದ ಪುಡಿ, ಉಪ್ಪು, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಕೊತ್ತಂಬರಿ ಸೊಪ್ಪು, ಕರಿಬೇವು, ಜೀರಿಗೆ ಎಲ್ಲವನ್ನೂ ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ನಂತರ ಬಾಣಲೆಗೆ ಎಣ್ಣೆ ಹಾಕಿ. ಅದು ಕಾದ ನಂತರ ಮಸಾಲಾ ಮಿಶ್ರಣವನ್ನು ವಡೆಯಂತೆ ತಟ್ಟಿ 2-3 ನಿಮಿಷಗಳ ಕಾಲ ಬೇಯಿಸಿ ತೆಗೆಯಬೇಕು. ನಂತರ ಅದು ತಣ್ಣಗಾಗಲು ಬಿಟ್ಟು, ಒಂದು ವಡೆಯಲ್ಲಿ ಮೂರು ಭಾಗದಂತೆ ಉದ್ದವಾಗಿ ಕತ್ತರಿಸಿಟ್ಟುಕೊಳ್ಳಬೇಕು.
- ಕತ್ತರಿಸಿದ ವಡೆಯನ್ನು ಮತ್ತೊಮ್ಮೆ ಕಾದ ಎಣ್ಣೆಗೆ ಹಾಕಿ ಕೆಂಪಗಾಗುವಂತೆ ಕರಿದರೆ ರುಚಿಕರವಾಗ ಕಲ್ಮಿ ವಡೆ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.