ಘೀ ರೈಸ್ 
ಅಡುಗೆ

ಘೀ ರೈಸ್

ಘೀ ರೈಸ್ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು

  • ಅಕ್ಕಿ - 1.5 ಬಟ್ಟಲು
  • ನೀರು - 2.5 ಬಟ್ಟಲು
  • ಪಲಾವ್ ಎಲೆ - 2
  • ಮರಾಠಿ ಮೊಗ್ಗು - 1
  • ಏಲಕ್ಕಿ - 4
  • ಲವಂಗ - 6
  • ಏಲಕ್ಕಿ - 2
  • ಹಸಿಮೆಣಿಸಿನ ಕಾಯಿ - 3
  • ತುಪ್ಪ - 3 ಚಮಚ
  • ಈರುಳ್ಳಿ - ಸಣ್ಣಗೆ ಉದ್ದಕ್ಕೆ ಹೆಚ್ಚಿದ್ದು 1
  • ಉಪ್ಪು - ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
  • 20 ನಿಮಿಷಗಳ ಅಕ್ಕಿಯನ್ನು ತೊಳೆದು ನೆನೆ ಹಾಕಬೇಕು.
  • ಒಲೆಯ ಮೇಲೆ ಪ್ಯಾನ್ ಇಟ್ಟು ಕಾದ ನಂತರ ಅದಕ್ಕೆ 1 ಚಮಚ ತುಪ್ಪವನ್ನು ಹಾಕಬೇಕು. ನಂತರ ಅದಕ್ಕೆ ದ್ರಾಕ್ಷಿಯನ್ನು ಹಾಕಿ ಕೆಂಪಗೆ ಹುರಿದಿಟ್ಟುಕೊಳ್ಳಬೇಕು.
  • ಇದೇ ಪ್ಯಾನ್ ನಲ್ಲಿಯೇ ಈರುಳ್ಳಿಯನ್ನು ಹಾಕಿ ಚಿನ್ನದ ಬಣ್ಣ ಬರುವವರೆಗೆ ಹುರಿದುಕೊಳ್ಳಬೇಕು.
  • ನಂತರ ಕುಕ್ಕರ್ ಇಟ್ಟು ಇದಕ್ಕೆ 3 ಚಮಚ ತುಪ್ಪವನ್ನು ಹಾಕಬೇಕು. ಕಾದ ನಂತರ ಇದಕ್ಕೆ ಪಲಾವ್ ಎಲೆ, ಏಲಕ್ಕಿ, ಲವಂಗ, ಚಕ್ಕೆ ಕಂಪೆಗೆ ಹುರಿದುಕೊಳ್ಳಬೇಕು.
  • ನಂತರ ಸಣ್ಣಗೆ ಹೆಚ್ಚಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿದುಕೊಳ್ಳಬೇಕು. ಇದಕ್ಕೆ ನೆನೆಸಿಟ್ಟುಕೊಂಡ ಅಕ್ಕಿಯನ್ನು ಹಾಗಿ 3-4 ನಿಮಿಷಗಳ ಸಣ್ಣ ಹುರಿಯಲ್ಲಿ ಹುರಿದುಕೊಳ್ಳಬೇಕು. ನಂತರ ಇದಕ್ಕೆ 2.5 ಬಟ್ಟಲು ನೀರು, ಉಪ್ಪನ್ನು ಹಾಕಬೇಕು.
  • ನಂತರ ಕುಕ್ಕರ್ ಮುಚ್ಚಳ ಮುಚ್ಚಿ ಮೂರು ಕೂಗು ಕೂಗಲು ಬಿಡಬೇಕು. ನಂತರ ತಯಾರಾದ ಈ ಘೀ ರೈಸ್ ಗೆ ಈಗಾಗಲೇ ಹುರಿದಿಟ್ಟುಕೊಂಡ ದ್ರಾಕ್ಷಿ, ಗೋಡಂಬಿ ಹಾಗೂ ಈರುಳ್ಳಿಯನ್ನು ಹಾಕಿ ಅಲಂಕರಿಸಿದರೆ ರುಚಿಕರವಾದ ಘೀ ರೈಸ್ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ