ಎಗ್ ಗ್ರೇವಿ
ಎಗ್ ಗ್ರೇವಿ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
- ಎಣ್ಣೆ - 4 ಚಮಚ
- ಸಾಸಿವೆ- ಸ್ವಲ್ಪ
- ಹಸಿಮೆಣಸಿನ ಕಾಯಿ - 4
- ಈರುಳ್ಳಿ - 2
- ಶುಂಠಿ, ಬೆಳ್ಳುಳ್ಳಿ ಪೇಸ್ಟ್ - ಸ್ವಲ್ಪ
- ಉಪ್ಪು - ರುಚಿಗೆ ತಕ್ಕಷ್ಟು
- ಅರಿಶಿಣ- ಸ್ವಲ್ಬ
- ದನಿಯಾ ಪುಡಿ - 1 ಚಮಚ
- ಅಚ್ಚ ಖಾರದ ಪುಡಿ - 1 ಚಮಚ
- ಗರಂ ಮಸಾಲಾ ಪುಡಿ - ಅರ್ಧ ಚಮಚ
- ಟೊಮೆಟೋ - 2
- ನೀರು - ಅರ್ಧ ಬಟ್ಟಲು
- ಮೊಟ್ಟೆ - 4
ಮಾಡುವ ವಿಧಾನ...
- ಮೊದಲು ಬಾಣಲೆಯನ್ನು ಒಲೆಯ ಮೇಲಿಟ್ಟು ಸ್ವಲ್ಪ ಎಣ್ಣೆ ಹಾಕಬೇಕು. ನಂತರ ಸಾಸಿವೆ, ಹಸಿಮೆಣಸಿನ ಕಾಯಿ ಹಾಗೂ ಈರುಳ್ಳಿಯನ್ನು ಹಾಕಿ ಕೆಂಪಗೆ ಹುರಿದುಕೊಳ್ಳಬೇಕು.
- ನಂತರ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಅರಿಶಿಣ, ಉಪ್ಪು, ದನಿಯಾ ಪುಡಿ, ಖಾರದ ಪುಡಿ, ಗರಂ ಮಸಾಲಾ ಪುಡಿ, ಟೊಮೆಟೋ ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. ನಂತರ ಸ್ವಲ್ಪ ನೀರು ಹಾಕಿ ಮಸಾಲೆ ಗಟ್ಟಿಯಾಗುವವರೆಗೂ ಕುದಿಸಬೇಕು.
- ಮತ್ತೊಂದು ಪಾತ್ರೆಯನ್ನು ಒಲೆಯ ಮೇಲಿಟ್ಟು ಸ್ವಲ್ಪ ನೀರು ಹಾಗೂ ಉಪ್ಪು ಹಾಕಿ ಮೊಟ್ಟೆಯನ್ನು ಬೇಯಿಸಿಕೊಳ್ಳಬೇಕು.
- ಬೆಂದ ಮೊಟ್ಟೆಯನ್ನು ಅರ್ಧ ಭಾಗಕ್ಕೆ ಕತ್ತರಿಸಿ ಈಗಾಗಲೇ ತಯಾರು ಮಾಡಿಕೊಂಡ ಗ್ರೇವಿಗೆ ಮೊಟ್ಟೆಯನ್ನು ಹಾಕಿ ನಿಧಾನಗತಿಯಲ್ಲಿ ಮಿಶ್ರಣ ಮಾಡಿದರೆ, ರುಚಿಕರವಾದ ಎಗ್ ಗ್ರೇವಿ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.