ಡ್ರೈ ಚಿಕನ್ ಪಾಪರ್ಸ್
ಡ್ರೈ ಚಿಕನ್ ಪಾಪರ್ಸ್ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
- ಬೋನ್ ಲೆಸ್ ಚಿಕನ್ - ಆರ್ಧ ಕೆಜಿ
- ಉಪ್ಪು- ರುಚಿಗೆ ತಕ್ಕಷ್ಟು
- ಕಾಳು ಮೆಣಸಿನ ಪುಡಿ - 1 ಚಮಚ
- ಶುಂಠಿ-ಬೆಳ್ಳುಳ್ಳಿ ಪುಡಿ - 1 ಚಮಚ
- ಅಚ್ಚ ಖಾರದ ಪುಡಿ - 1 ಚಮಚ
- ಮೊಟ್ಟೆ - 3
- ಮೈದಾ ಹಿಟ್ಟು - 1 ಬಟ್ಟಲು
- ಎಣ್ಣೆ - ಕರಿಯಲು
ಮಾಡುವ ವಿಧಾನ...
- ಮೊದಲು ಮಾಂಸವನ್ನು ಚೆನ್ನಾಗಿ ತೊಳೆದು ಮಧ್ಯಮ ಗಾತ್ರಕ್ಕೆ ಕತ್ತರಿಸಿಕೊಳ್ಳಬೇಕು.
- ನಂತರ ಪಾತ್ರೆಯೊಂದಕ್ಕೆ ಉಪ್ಪು, ಖಾರದ ಪುಡಿ, ಶುಂಠಿ-ಬೆಳ್ಳುಳ್ಳಿ ಪುಡಿ, ಕಾಳು ಮೆಣಿಸಿನ ಪುಡಿ, ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. ನಂತರ ಇದಕ್ಕೆ ಮಾಂಸವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ಮತ್ತೊಂದು ಬಟ್ಟಲಿನಲ್ಲಿ ಮೊಟ್ಟೆಯನ್ನು ಹೊಡೆದು ಚೆನ್ನಾಗಿ ಮಿಶ್ರಣ ಮಾಡಬೇಕು.
- ನಂತರ ಮಸಾಲೆಯಲ್ಲಿ ನೆನೆದ ಮಾಂಸವನ್ನು ಮೈದಾ ಹಿಟ್ಟಿನಲ್ಲಿ ಹೊರಳಿಸಿ ನಂತರ ಮೊಟ್ಟೆಯಲ್ಲಿ ಅದ್ದಿ ಮತ್ತೆ ಮೈದಾ ಹಿಟ್ಟಿನಲ್ಲಿ ಹೊರಳಿಸಿ ಕಾದ ಎಣ್ಣೆಯಲ್ಲಿ 2 ನಿಮಿಷ ಕರಿದು ತೆಗೆಯಬೇಕು. ತಣ್ಣಗಾದ ನಂತರ ಮತ್ತೆ ಎಣ್ಣೆಗೆ ಹಾಕಿ ಚೆನ್ನಾಗಿ ಕರಿದರೆ ರುಚಿಕರವಾದ ಡ್ರೈ ಚಿಕನ್ ಪಾಪರ್ಸ್ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.