- ಮೈದಾಹಿಟ್ಟು- ಅರ್ಧ ಬಟ್ಟಲು
- ಜೋಳದ ಹಿಟ್ಟು- 2 ಚಮಚ
- ಶುಂಠಿ, ಬೆಳ್ಳುಳ್ಳಿ ಪೇಸ್ಟ್- 1 ಚಮಚ
- ಅಚ್ಚ ಖಾರದ ಪುಡಿ- 1 ಚಮಚ
- ಉಪ್ಪು- ರುಚಿಗೆ ತಕ್ಕಷ್ಟು
- ಸೋಯಾ ಸಾಸ್- 1 ಚಮಚ
- ಹೂಕೋಸು- 1 ಬಟ್ಟಲು
- ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
- ಸ್ಪ್ರಿಂಗ್ ಆನಿಯನ್- ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)
- ಕ್ಯಾಪ್ಸಿಕಂ- ಸ್ವಲ್ಪ
- ಚಿಲ್ಲಿ ಸಾಸ್- 1 ಚಮಚ
- ಟೊಮೆಟೋ ಸಾಸ್- 1 ಚಮಚ
- ಸೋಯಾ ಸಾಸ್ - 1 ಚಮಚ
- ವಿನೆಗರ್- 1 ಚಮಚ
- ಕಾಳು ಮೆಣಸಿನ ಪುಡಿ- ಅರ್ಧ ಚಮಚ
- ಉಪ್ಪು- ರುಚಿಗೆ ತಕ್ಕಷ್ಟು
- ಪಾತ್ರೆಯೊಂದನ್ನು ತೆಗೆದುಕೊಂಡು ಅದಕ್ಕೆ ಮೈದಾಹಿಟ್ಟು, ಜೋಳದ ಹಿಟ್ಟು, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಅಚ್ಚ ಖಾರದ ಪುಡಿ, ಉಪ್ಪು, ಸೋಯಾ ಸಾಸ್ ಎಲ್ಲವನ್ನೂ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
- ಹೂಕೋಸನ್ನು ಸಣ್ಣದಾಗಿ ಬಿಡಿಸಿಕೊಂಡು, ಚೆನ್ನಾಗಿ ತೊಳೆದುಕೊಳ್ಳಬೇಕೆ, ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಕಾಯಲು ಬಿಡಿ.
- ನಂತರ ಹೂಕೋಸನ್ನು ಮೈದಾಹಿಟ್ಟಿನ ಮಸಾಲೆಯೊಂದಿಗೆ ಅದ್ದಿ ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೂ ಕರಿದುಕೊಳ್ಳಿ.
- ಒಲೆಯ ಮೇಲೆ ಮತ್ತೊಂದು ಬಾಣಲೆಯಿಟ್ಟು ಅದಕ್ಕೆ 2 ಚಮಚ ಎಣ್ಣೆ ಹಾಕಿ. ನಂತರ ಸಣ್ಣಗೆ ಹೆಚ್ಚಿಕೊಂಡ ಬೆಳ್ಳುಳ್ಳಿ, ಸ್ಪ್ರಿಂಗ್ ಆನಿಯನ್, ಕ್ಯಾಪ್ಸಿಕಂ ಹಾಕಿ ಚೆನ್ನಾಗಿ ಹುರಿದುಕೊಳ್ಳಿ. ನಂತರ ಇದಕ್ಕೆ ಚಿಲ್ಲಿ ಸಾಸ್, ಟೊಮೆಟೋ ಸಾಸ್, ಸೋಯಾ ಸಾಸ್, ವಿನೆಗರ್, ಕಾಳು ಮೆಣಸಿನ ಪುಡಿ, ಉಪ್ಪು ಹಾಕಿ.
- ಬಟ್ಟಲಿಗೆ ಸ್ವಲ್ಪ ನೀರು ಹಾಗೂ ಜೋಳದ ಹಿಟ್ಟನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಈ ಮಿಶ್ರಣವನ್ನು ಕುದಿಯುತ್ತಿರುವ ಗ್ರೇವಿಯೊಂದಿಗೆ ಹಾಕಿ 5 ನಿಮಿಷ ಕುದಿಸಿ. ನಂತರ ಈಗಾಗಲೇ ಮಾಡಿಟ್ಟಿಕೊಂಡಿದ್ದ ಗೋಬಿಗಳನ್ನು ಇದಕ್ಕೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ, ರುಚಿಕರವಾದ ಗೋಬಿ ಮಂಚೂರಿ ಸವಿಯಲು ಸಿದ್ಧ.