ವೆಜ್ ಆಮ್ಲೆಟ್
ರುಚಿಕರವಾದ ವೆಜ್ ಆಮ್ಲೆಟ್ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಕಡಲೆ ಹಿಟ್ಟು - 1 ಬಟ್ಟಲು
- ಓಂ ಕಾಳು - ಕಾಲು ಚಮಚ
- ಉಪ್ಪು - ರುಚಿಗೆ ತಕ್ಕಷ್ಟು
- ಅರಿಶಿಣದ ಪುಡಿ - ಚಿಟಿಕೆಯಷ್ಟು
- ಈರುಳ್ಳಿ - ಸಣ್ಣಗೆ ಹೆಚ್ಚಿದ್ದು (2)
- ಟೊಮೆಟೋ - ಸಣ್ಣಗೆ ಹೆಚ್ಚಿದ್ದು (1)
- ಹಸಿಮೆಣಸಿನ ಕಾಯಿ - ಸಣ್ಣಗೆ ಹೆಚ್ಚಿದ್ದು (1-2)
- ಕೊತ್ತಂಬರಿ ಸೊಪ್ಪು - ಸಣ್ಣಗೆ ಹೆಚ್ಚಿದ್ದು ಸ್ವಲ್ಪ
- ಶುಂಠಿ- ಸಣ್ಣಗೆ ಹೆಚ್ಚಿದ್ದು ಸ್ವಲ್ಪ
- ಎಣ್ಣೆ -ಅಗತ್ಯಕ್ಕೆ ತಕ್ಕಷ್ಟು
ಮಾಡುವ ವಿಧಾನ...
- ಮೊದಲು ಪಾತ್ರೆಗೆ ಕಡಲೆಹಿಟ್ಟು, ಅರಿಶಿಣ, ಓಂಕಾಳು, ಉಪ್ಪು ಹಾಗೂ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ 30 ನಿಮಿಷಗಳ ಕಾಲ ನೆನೆಯಲು ಬಿಡಬೇಕು.
- ಬಳಿಕ ಈ ಮಿಶ್ರಣಕ್ಕೆ ಹೆಚ್ಚಿಟ್ಟುಕೊಂಡ ಈರುಳ್ಳು, ಶುಂಠಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನ ಕಾಯಿ, ಟೊಮೆಟೋ ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ಒಲೆಯ ಮೇಲೆ ಪ್ಯಾನ್ ಇಟ್ಟು ಹಿಟ್ಟನ್ನು ದೋಸೆಯಂತೆ ಹಾಕಿ. ಬೇಯಲು ಸ್ವಲ್ಪ ಎಣ್ಣೆ ಹಾಕಿ ಎರಡೂ ಬದಿಯಲ್ಲೂ ಕೆಂಪಗೆ ಸುಟ್ಟರೆ, ರುಚಿಕರವಾದ ವೆಜ್ ಆಮ್ಲೆಟ್ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.