ಕಡಲೆಕಾಯಿ ಬೀಜದ ಮಸಾಲೆ ಚಾಟ್ 
ಅಡುಗೆ

ಕಡಲೆಕಾಯಿ ಬೀಜ ಮಸಾಲೆ ಚಾಟ್

ರುಚಿಕರವಾದ ಕಡಲೆಕಾಯಿ ಬೀಜದ ಮಸಾಲೆ ಚಾಟ್ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು
  • ಕಡಲೆಕಾಯಿ ಬೀಜ- 1 ಬಟ್ಟಲು
  • ಎಣ್ಣೆ- 2 ಚಮಚ
  • ಕರಿಬೇವು ಎಲೆ - ಸ್ವಲ್ಪ
  • ಅರಿಶಿನ ಪುಡಿ - ಅರ್ಧ ಚಮಚ
  • ಅಚ್ಚ ಖಾರದ ಪುಡಿ - ಮುಕ್ಕಾಲು ಚಮಚ
  • ಇಂಗು- ಸ್ವಲ್ಪ
  • ಕಾಳು ಮೆಣಸು- ತರಿತರಿಯಾಗಿ ಕುಟ್ಟಿಕೊಂಡಿದ್ದು 3-4 ಚಮಚ
  • ಉಪ್ಪು- ರುಚಿಗೆ ತಕ್ಕಷ್ಟು
  • ಈರುಳ್ಳಿ - ಸಣ್ಣಗೆ ಹೆಚ್ಚಿದ್ದು 1-2 ಚಮಚ
  • ಟೊಮೆಟೋ- ಸಣ್ಣಗೆ ಹೆಚ್ಚಿದ್ದು 1-2 ಚಮಚ
  • ಕ್ಯಾರೆಟ್ ತುರಿ- 1-2 ಚಮಚ
  • ಕೊತ್ತಂಬರಿ ಸೊಪ್ಪು- - ಸಣ್ಣಗೆ ಹೆಚ್ಚಿದ್ದು ಸ್ವಲ್ಪ
  • ನಿಂಬೆಹಣ್ಣಿನ ರಸ- 1 ಚಮಚ
ಮಾಡುವ ವಿಧಾನ...
  • ಕಡಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದುಕೊಂಡು, ಸಂಪೂರ್ಣವಾಗಿ ತಣ್ಣಗಾದ ಬಳಿಕ ಸಿಪ್ಪೆಯನ್ನು ತೆಗೆದಿಟ್ಟುಕೊಳ್ಳಬೇಕು.
  • ನಂತರ ಬಾಣಲೆಗೆ 1 ಚಮಚ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಕರಿಬೇವು ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ಬಳಿಕ ಅರಿಶಿಣದ ಪುಡಿ, ಅಚ್ಚ ಖಾರದ ಪುಡಿ, ಕಾಳು ಮೆಣಸಿನ ಪುಡಿ ಹಾಕಿ ಕೆಂಪಗೆ ಹುರಿದುಕೊಂಡು, ಇದಕ್ಕೆ ಹುರಿದಿಟ್ಟುಕೊಂಡ ಕಡಲೆಕಾಯಿ ಬೀಜ, ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. 
  • ನಂತರ ಅದನ್ನು ಒಂದು ಪಾತ್ರೆಗೆ ಹಾಕಿ ಈರುಳ್ಳಿ, ಟೊಮೆಟೋ, ಕ್ಯಾರೆಟ್ ತುರಿ, ಕೊತ್ತಂಬರಿ ಸೊಪ್ಪು, ನಿಂಬೆ ರಸ ಹಾಗೂ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ, ರುಚಿಕರವಾದ ಮಸಾಲೆ ಕಡಲೆಕಾಯಿ ಬೀಜದ ಚಾಟ್ ಸವಿಯಲು ಸಿದ್ಧ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ