ಎಗ್ ಪರೋಟ
ರುಚಿಕರವಾದ ಎಗ್ ಪರೋಟ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಎಣ್ಣೆ- ಅಗತ್ಯಕ್ಕನುಗುಣವಾಗಿ
- ಈರುಳ್ಳಿ- ಸಣ್ಣಗೆ ಹೆಚ್ಚಿದ್ದು ಮುಕ್ಕಾಲು ಬಟ್ಟಲು
- ಬೆಳ್ಳುಳ್ಳಿ- ಸಣ್ಣಗೆ ಹೆಚ್ಚಿದ್ದು 2 ಚಮಚ
- ಶುಂಠಿ- ಸಣ್ಣಗೆ ಹೆಚ್ಚಿದ್ದು 2 ಚಮಚ
- ಹಸಿಮೆಣಸಿನ ಕಾಯಿ- ಸಣ್ಣಗೆ ಹೆಚ್ಚಿದ್ದು 2-3
- ಅಚ್ಚ ಖಾರದ ಪುಡಿ- 1 ಚಮಚ
- ಅರಿಶಿನ ಪುಡಿ- ಕಾಲು ಚಮಚ
- ಮೊಟ್ಟೆ- 4
- ಟೊಮೆಟೋ- ಸಣ್ಣಗೆ ಹೆಚ್ಚಿದ್ದು ಮುಕ್ಕಾಲು ಬಟ್ಟಲು
- ಕೊತ್ತಂಬರಿ ಸೊಪ್ಪು- ಸಣ್ಣಗೆ ಹೆಚ್ಚಿದ್ದು ಸ್ವಲ್ಪ
- ಗೋದಿ ಹಿಟ್ಟು- 1 ಬಟ್ಟಲು
- ಮೈದಾ ಹಿಟ್ಟು- ಅರ್ಧ ಬಟ್ಟಲು
- ಉಪ್ಪು- ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
- ಒಲೆಯ ಮೇಲೆ ಬಾಣಲೆ ಇಟ್ಟು 2-3 ಚಮಚ ಎಣ್ಣೆ ಹಾಕಿ. ಎಣ್ಣೆ ಕಾದ ನಂತರ ಅದಕ್ಕೆ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ಹಸಿಮೆಣಸಿನ ಕಾಯಿ, ಅಚ್ಚ ಖಾರದ ಪುಡಿ, ಅರಿಶಿನ ಪುಡಿ ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ನಂತರ ಮೊಟ್ಟೆಗಳನ್ನು ಒಡೆದು ಹಾಕಬೇಕು, ಬಳಿಕ ಟೊಮೆಟೋ, ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕೆಂಪಗೆ ಹುರಿದುಕೊಳ್ಳಬೇಕು.
- ಪಾತ್ರೆಯೊಂದನ್ನು ತೆಗೆದುಕೊಂಡು ಗೋಧಿ, ಮೈದಾ ಹಿಟ್ಟು, ಉಪ್ಪು ಹಾಕಿ ಚೆನ್ನಾಗಿ ಕಲಸಿಕೊಳ್ಳಬೇಕು. ನಂತರ ನೀರು ಮತ್ತು ಎಣ್ಣೆ ಹಾಕಿ ಚಪಾತಿ ಹಿಟ್ಟನ್ನು ತಯಾರು ಮಾಡಿಕೊಳ್ಳಬೇಕು.
- ಹಿಟ್ಟನ್ನು ಚಪಾತಿಯಂತೆ ಒತ್ತಿ ಮಧ್ಯೆ ಈಗಾಗಲೇ ಮಾಡಿಕೊಂಡ ಮೊಟ್ಟೆ ಮಸಾಲೆಯನ್ನು ಮಧ್ಯೆ ಇಟ್ಟು, ಹೊರಗೆ ಬಾರದಂತೆ ಮುಚ್ಚಿ ಮತ್ತೆ ಪರೋಟ ರೀತಿಯಲ್ಲಿ ಲಟ್ಟಿಸಿ, ಎರಡೂ ಬದಿಯಲ್ಲೂ ಸುಟ್ಟರೆ, ರುಚಿಕರವಾದ ಎಗ್ ಪರೋಟ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.