ಮೂಲಂಗಿ ದೋಸೆ
ರುಚಿಕರವಾದ ಹಾಗೂ ಆರೋಗ್ಯಕರವಾದ ಮೂಲಂಗಿ ದೋಸೆ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಅಕ್ಕಿ-250 ಗ್ರಾಂ
- ಮೂಲಂಗಿ- 2
- ತೆಂಗಿನಕಾಯಿ ತುರಿ- ಒಂದು ಸಣ್ಣ ಬಟ್ಟಲು
- ಹಸಿಮೆಣಸಿನ ಕಾಯಿ- 2-3
- ಉಪ್ಪು- ರುಚಿಗೆ ತಕ್ಕಷ್ಟು
- ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
- ಜೀರಿಗೆ-ಅರ್ಧ ಚಮಚ
ಮಾಡುವ ವಿಧಾನ...
- ಅಕ್ಕಿಯನ್ನು ಚೆನ್ನಾಗಿ ತೊಳೆದು 3 ಗಂಟೆಗಳ ಕಾಲ ನೆನೆಯಲು ಬಿಡಬೇಕು. ನಂತರ ಮೂಲಂಗಿಯನ್ನು ಚೆನ್ನಾಗಿ ತೊಳೆದು ಕೊಬ್ಬರಿ ತುರಿಯುವ ಮಣೆಯಲ್ಲಿ ತುರಿದುಕೊಳ್ಳಬೇಕು.
- ಅಕ್ಕಿ ನೆಂದ ಬಳಿಕ ನೀರನ್ನು ಬಸಿದು, ಇದರ ಜೊತೆಗೆ ಹಸಿಮೆಣಸಿನ ಕಾಯಿ, ತುರಿದುಕೊಂಡ ಮೂಲಂಗಿ ಹಾಗೂ ತೆಂಗಿನ ತುರಿಯನ್ನು ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು.
- ಹಿಟ್ಟನ್ನು ಒಂದು ಪಾತ್ರೆಗೆ ಹಾಕಿ ಉಪ್ಪು, ಜೀರಿಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಸ್ವಲ್ಪ ಹೊತ್ತು ತಟ್ಟೆ ಮುಚ್ಚಿ ಇಡಬೇಕು.
- ನಂತರ ಕಾವಲಿಯನ್ನು ಒಲೆಯ ಮೇಲಿಟ್ಟು, ಕಾವಲಿ ಕಾದ ನಂತರ ಎಣ್ಣೆ ಸವರಿ ಹಿಟ್ಟನ್ನು ಹಾಕಿ ಎರಡೂ ಬದಿಯಲ್ಲೂ ಬೇಯಿಸಿದರೆ, ರುಚಿಕರವಾದ ಹಾಗೂ ಆರೋಗ್ಯಕರವಾದ ಮೂಲಂಗಿ ದೋಸೆ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.