ಹೆಸರುಬೇಳೆ ವಡೆ
ರುಚಿಕರವಾದ ಹೆಸರುಬೇಳೆ ವಡೆ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಹೆಸರುಬೇಳೆ- 1 ಬಟ್ಟಲು
- ಹಸಿಮೆಣಸಿನ ಕಾಯಿ- 2-3
- ಶುಂಠಿ, ಬೆಳ್ಳುಳ್ಳಿ-ಸ್ವಲ್ಪ
- ಉಪ್ಪು-ರುಚಿಗೆ ತಕ್ಕಷ್ಟು
- ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು
- ಅಡುಗೆ ಸೋಡಾ-ಚಿಟಿಕೆಯಷ್ಟು
- ಈರುಳ್ಳಿ- ಸಣ್ಣಗೆ ಹೆಚ್ಚಿದ್ದು ಒಂದು ಸಣ್ಣ ಬಟ್ಟಲು
- ಕೊತ್ತಂಬರಿ ಸೊಪ್ಪು- ಸಣ್ಣಗೆ ಹೆಚ್ಚಿದ್ದು ಸ್ವಲ್ಪ
ಮಾಡುವ ವಿಧಾನ...
- ಹೆಸರುಬೇಳೆಯನ್ನು ಚೆನ್ನಾಗಿ ತೊಳೆದು 3-5 ಗಂಟೆಗಳ ಕಾಲ ನೆನೆಸಿಟ್ಟುಕೊಳ್ಳಬೇಕು.
- ನಂತರ ನೀರು ಬಸಿದು, ಇದಕ್ಕೆ ಹಸಿಮೆಣಿಸಿನ ಕಾಯಿ, ಉಪ್ಪು, ಶುಂಠಿ, ಬೆಳ್ಳುಳ್ಳಿ ಹಾಕಿ ನೀರು ಹಾಕದೆ ನುಣ್ಣಗೆ ರುಬ್ಬಿಕೊಳ್ಳಬೇಕು.
- ಈ ರುಬ್ಬಿಕೊಂಡ ಹೆಸರುಬೇಳೆಗೆ ಈರುಳ್ಳಿ ಹಾಗೂ ಕೊತ್ತಂಬರಿ ಸೊಪ್ಪು, ಅಡುಗೆ ಸೋಡಾವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಬೇಕು. ನಂತರ ಮಿಶ್ರಣವನ್ನು ಸಣ್ಣ ಸಣ್ಣೆ ಉಂಡೆ ಮಾಡಿ ಎಣ್ಣೆಗೆ ಬಿಟ್ಟು, ಕೆಂಪಗೆ ಕರಿದರೆ ರುಚಿಕರವಾದ ಹೆಸರುಬೇಳೆ ವಡೆ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.