ರೆಸ್ಟೋರೆಂಟ್ ಸ್ಟೈಲ್ ಚಿಕನ್ ಗ್ರೇವಿ
ರುಚಿಕರವಾದ ರೆಸ್ಟೋರೆಂಟ್ ಸ್ಟೈಲ್ ಚಿಕನ್ ಗ್ರೇವಿ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಚಿಕನ್ - ಅರ್ಧ ಕೆಜಿ
- ಒಣಗಿದ ಮೆಣಸಿನಕಾಯಿ - 8-10
- ಈರುಳ್ಳಿ - 2
- ಟೊಮೆಟೊ – 2
- ಗೋಡಂಬಿ - ಸ್ವಲ್ಪ
- ಕೊತ್ತಂಬರಿ ಸೊಪ್ಪು- ಸ್ವಲ್ಪ
- ಅರಿಸಿನ- ಸ್ವಲ್ಪ
- ಎಣ್ಣೆ – ಸ್ವಲ್ಪ
- ಉಪ್ಪು – ರುಚಿಗೆ ತಕ್ಕಷ್ಟು
- ಅಚ್ಚ ಖಾರದ ಪುಡಿ- 1 ಚಮಚ
- ದನಿಯಾ ಪುಡಿ – 1 ಚಮಚ
- ಗರಂಮಸಾಲ – 1 ಚಮಚ
- ಕಸೂರಿ ಮೇಥಿ – 1 ಚಮಚ
- ಶುಂಠಿ-ಬೆಳ್ಳುಳ್ಳಿ ಪೇಸ್ಟ್ – ಸ್ವಲ್ಪ
ಮಾಡುವ ವಿಧಾನ...
- ಮೊದಲು ಒಣಗಿದ ಮೆಣಸಿನ ಕಾಯಿಯನ್ನು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಟ್ಟುಕೊಳ್ಳಬೇಕು. ನಂತರ ನೆನೆದ ಒಣಮೆಣಸಿನಕಾಯಿ ಟೊಮೆಟೊ ಮತ್ತು ಗೋಡಂಬಿಯನ್ನು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು.
- ಬಾಣಲೆಯನ್ನು ಒಲೆಯ ಮೇಲಿಟ್ಟು ಬಿಸಿಯಾದ ಬಳಿಕ 2 ಚಮಚ ಎಣ್ಣೆ ಹಾಕಿ ಈರುಳ್ಳಿಯನ್ನು ಕೆಂಪಗೆ ಹುರಿದುಕೊಳ್ಳಿ. ಬಳಿಕ ಇದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಒಂದು ನಿಮಿಷ ಹುರಿಯಿರಿ. ನಂತರ ತೊಳೆದಿಟ್ಟ ಚಿಕನ್ ಸೇರಿಸಿ ಅದಕ್ಕೆ ಅರಿಸಿನ, ಉಪ್ಪು, ಅಚ್ಚ ಖಾರದ ಪುಡಿ, ದನಿಯಾ ಪುಡಿ ಹಾಕಿ. ಚಿಕನ್ ಅರ್ಧ ಬೇಯುವವರೆಗೂ ಎಣ್ಣೆಯಲ್ಲಿ ಫ್ರೈ ಮಾಡಿ.
- ಈಗ ರುಬ್ಬಿದ ಮಸಾಲೆಯನ್ನು ಸೇರಿಸಿ ಎಣ್ಣೆ ಬಿಡುವವರೆಗೂ ಬೇಯಿಸಿ. ಕೊನೆಯಲ್ಲಿ ಗರಂಮಸಾಲೆ, ಕಸೂರಿ ಮೇಥಿ, ಕೊತ್ತಂಬರಿ ಸೊಪ್ಪು ಹಾಗೂ ಅರ್ಧ ಲೋಟ ನೀರು ಸೇರಿಸಿ. 4 ನಿಮಿಷ ಕುದಿಸಿಕೊಂಡರೆ ರುಚಿಕರವಾದ ರೆಸ್ಟೋರೆಂಟ್ ಸ್ಟೈಲ್ ಚಿಕನ್ ಗ್ರೇವಿ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.