ತೆಂಗಿನಕಾಯಿ ದೋಸೆ
ರುಚಿಕರವಾದ ತೆಂಗಿನಕಾಯಿ ದೋಸೆ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಅಕ್ಕಿ- 2 ಬಟ್ಟಲು
- ಮೆಂತ್ಯೆ- 1 ಚಮಚ
- ತೆಂಗಿನ ಕಾಯಿ ತುರಿ- 1 ಬಟ್ಟಲು
- ಅವಲಕ್ಕಿ- 1 ಬಟ್ಟಲು
- ಉಪ್ಪು- ರುಚಿಗೆ ತಕ್ಕಷ್ಟು
- ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
ಮಾಡುವ ವಿಧಾನ...
- ಮೊದಲಿಗೆ ಒಂದು ಪಾತ್ರೆಗೆ ಅಕ್ಕಿ ಹಾಗೂ ಮೆಂತ್ಯೆಯನ್ನು ಹಾಕಿ 4 ಚೆನ್ನಾಗಿ ತೊಳೆದು 4 ಗಂಟೆಗಳ ಕಾಲ ನೆನೆಯಲು ಬಿಡಿ.
- ಹಿಟ್ಟು ರುಬ್ಬಿಕೊಳ್ಳಲು ಸ್ವಲ್ಪ ಸಮಯವಿರುವಾಗಲೇ ಅವಲಕ್ಕಿಯನ್ನು ನೆನೆಸಿಟ್ಟುಕೊಳ್ಳಿ.
- ಮಿಕ್ಸಿ ಜಾರ್'ಗೆ ನೆನೆಸಿದ ಅಕ್ಕಿಯನ್ನು ನುಣ್ಣಗೆ ರುಬ್ಬಿಕೊಳ್ಳಿ. ನಂತರ ಅವಲಕ್ಕಿ ಹಾಗೂ ತೆಂಗಿನಕಾಯಿ ತುರಿಯನ್ನೂ ನುಣ್ಣಗೆ ರುಬ್ಬಿಕೊಂಡು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ 8 ಗಂಟೆಗಳ ಕಾಲ ಮುಚ್ಚಿ ಫರ್ಮೆಂಟ್ ಆಗಲು ಇಡಿ.
- 8 ಗಂಟೆಗಳ ಫರ್ಮೆಂಟೇಶನ್ ನ ನಂತರ, ಹಿಟ್ಟನ್ನು ಚೆನ್ನಾಗಿ ಕಲಸಿಕೊಳ್ಳಿ. ಬಿಸಿ ತವಾ ಮೇಲೆ ಹಿಟ್ಟನ್ನು ಹಾಕಿ ಎರಡೂ ಬದಿಯಲ್ಲೂ ಕೆಂಪಗೆ ಸುಟ್ಟರೆ ರುಚಿಕರವಾದ ಹಾಗೂ ಮೃದುವಾದ ತೆಂಗಿನಕಾಯಿ ದೋಸೆ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.