ಮೊದಲಿಗೆ ಒಲೆಯ ಮೇಲೆ ಬಾಣಲೆ ಇಟ್ಟು ಅದಕ್ಕೆ 1-2 ಚಮಚ ಎಣ್ಣೆ ಹಾಕಿ ಕಾಯಲು ಬಿಡಿ. ನಂತರ ಬಿಳಿ ಎಳ್ಳು ಅಥವಾ ಕಡಲೆಕಾಯಿ ಬೀಜವನ್ನು ಹಾಕಿ ಕೆಂಪಗೆ ಹುರಿದುಕೊಳ್ಳಿ. ನಂತರ ಟೊಮೆಟೋ, ಈರುಳ್ಳಿ, ಶುಂಠಿ, ಬೆಳ್ಳುಳ್ಳಿ, ಹಸಿಮೆಣಸಿನ ಕಾಯಿ ಹಾಕಿ ಕೆಂಪಗೆ ಹುರಿದುಕೊಳ್ಳಿ.
ನಂತರ ಅರ್ಧ ಲೋಟ ನೀರು ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಕರಿಬೇವು, ಕೊತ್ತಂಬರಿ ಸೊಪ್ಪು, ಜೀರಿಗೆ, ಹುಣಸೆಹಣ್ಣು, ಉಪ್ಪು ಹಾಕಿ 5 ನಿಮಿಷ ಕುದಿಸಿಕೊಳ್ಳಿ. ನಂತರ ಇದು ತಣ್ಣಗಾಗಲು ಬಿಡಿ.
ತಣ್ಣಗಾದ ಬಳಿಕ ಎಲ್ಲವನ್ನೂ ರುಬ್ಬಿಕೊಂಡರೆ ರುಚಿಕರವಾದ ಸ್ಪೆಷಲ್ ಚಟ್ನಿ ಇಡ್ಲಿ, ದೋಸೆ, ಚಪಾತಿಯೊಂದಿಗೆ ಸವಿಯಲು ಸಿದ್ಧ.