ಕೊಬ್ಬರಿ ಲಡ್ಡು
ರುಚಿಕರವಾದ ಕೊಬ್ಬರಿ ಲಡ್ಡು ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
- ತುಪ್ಪ-1 ಚಮಚ
- ತೆಂಗಿನಕಾಯಿ ತುರಿ- ಎರಡೂವರೆ
- ಬೆಲ್ಲ- 1 ಬಟ್ಟಲು
- ಏಲಕ್ಕಿ ಪುಡಿ- ಸ್ವಲ್ಪ
ಮಾಡುವ ವಿಧಾನ...
- ದೊಡ್ಡ ಕಡಾಯಿಯಲ್ಲಿ ತುಪ್ಪವನ್ನು ಬಿಸಿ ಮಾಡಿ, ತೆಂಗಿನಕಾಯಿ ತುರಿ ಸೇರಿಸಿ. ತೇವಾಂಶ ಒಣಗುವವರೆಗೂ ಹುರಿಯಿರಿ. ಈ ಮಿಶ್ರಣಕ್ಕೆ ಬೆಲ್ಲ ಸೇರಿಸಿ ಮತ್ತು ಮಧ್ಯಮ ಉರಿಯಲ್ಲಿ ಬೇಯಿಸಿ.
- ಬೆಲ್ಲ ಕರಗುವ ತನಕ ಬೇಯಿಸಬೇಕು. ಇದಕ್ಕೆ ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಪಾತ್ರೆ ಇಳಿಸಿ. ಸಿದ್ಧವಾಗಿರುವ ಮಿಶ್ರಣವನ್ನು ತೆಗೆದುಕೊಂಡು ಉಂಡೆ ಮಾಡಿ. ಇದೀಗ ರುಚಿಕರವಾದ ಕೊಬ್ಬರಿ ಲಡ್ಡು ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.