ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿಕೊಳ್ಳಬೇಕು. ಕಸ್ತೂರಿ ಮೇಥಿ, ಸೋಂಪು, ಚಕ್ಕೆ -ಲವಂಗ, ಸ್ಟಾರ್ ಮಸಾಲ ಹೂ, ಅನಾನಸ್ ಮೊಗ್ಗು, ಏಲಕ್ಕಿ ಸೇರಿಸಿ ಮಿಶ್ರಣ ಮಾಡಬೇಕು.
ಬಳಿಕ ಹೆಚ್ಚಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಚೆನ್ನಾಗಿ ಫ್ರೈ ಮಾಡಿಕೊಳ್ಳಬೇಕು. ಬಳಿಕ ಟೊಮೆಟೊ, ಶುಂಠಿ -ಬೆಳ್ಳುಳ್ಳಿ ಪೇಸ್ಟ್ ಹಾಗೂ ಸ್ವಲ್ಪ ಉಪ್ಪು ಹಾಕಿಕೊಂಡು ಬೆರೆಸಿಕೊಡಬೇಕು.
ನಂತರ ಮಸಾಲ ಪುಡಿಗಳು ಹಾಗೂ ಬಟಾಣಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ನೀರನ್ನು ಹಾಕಿ 5 ನಿಮಿಷಗಳ ಕಾಲ ಬಟಾಣಿ ಬೇಯಲು ಬಿಡಿ. ಇದೀಗ ಕತ್ತರಿಸಿದ ಮಶ್ರೂಮ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
10 ರಿಂದ 15 ನಿಮಿಷ ಬೇಯಲು ಬಿಡಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪನ್ನು ಉದುರಿಸಿ. ಇದೀಗ ರುಚಿಕರವಾದ ಮಶ್ರೂಮ್ ಗ್ರೇವಿ ಸವಿಯಲು ಸಿದ್ಧ.