ಮಾವಿನಕಾಯಿ ಚಟ್ನಿ 
ಅಡುಗೆ

ಯುಗಾದಿ ವಿಶೇಷ: ಮಾವಿನಕಾಯಿ ಚಟ್ನಿ

ರುಚಿಕರವಾದ ಮಾವಿನಕಾಯಿ ಚಟ್ನಿ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಮಾವಿನಕಾಯಿ- 1
  • ಮೆಂತ್ಯೆ ಕಾಳು- 1/4 ಚಮಚ
  • ತೆಂಗಿನ ತುರಿ- 1 ಬಟ್ಟಲು
  • ಒಣ ಮೆಣಸಿನಕಾಯಿ- 3-4
  • ಉದ್ದಿನ ಬೇಳೆ - 1 ಚಮಚ
  • ಕಡಲೆಬೇಳೆ- - 1 ಚಮಚ
  • ಜೀರಿಗೆ - 1 ಚಮಚ
  • ಇಂಗು- ಸ್ವಲ್ಪ
  • ಬೆಳ್ಳುಳ್ಳಿ- 5 ಎಸಳು
  • ಕರಿಬೇವು-ಸ್ವಲ್ಪ
  • ಸಾಸಿವೆ- ಸ್ವಲ್ಪ
  • ಉಪ್ಪು- ರುಚಿಗೆ ತಕ್ಕಷ್ಟು
  • ಅಡುಗೆ ಎಣ್ಣೆ- ಸ್ವಲ್ಪ
  • ಬೆಲ್ಲ- ಸ್ವಲ್ಪ

ಮಾಡುವ ವಿಧಾನ...

  • ಮಾವಿನಕಾಯಿಯನ್ನು ತೊಳೆದು ಸಿಪ್ಪೆ ತೆಗೆಯಿರಿ. ಸಿಪ್ಪೆ ತೆಗೆದ ಮಾವಿನಕಾಯಿಯನ್ನು ತುರಿದುಕೊಳ್ಳಿ
  • ಒಲೆಯ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ 1 ಟೀ ಸ್ಪೂನ್ ಎಣ್ಣೆ ಹಾಕಿ. ಅದು ಬಿಸಿಯಾಗುತ್ತಲೆ ಅದಕ್ಕೆ ಕಡಲೆಬೇಳೆ, ಉದ್ದಿನಬೇಳೆ, ಮೆಂತ್ಯೆ ಕಾಳು ಹಾಕಿ ಹುರಿಯಿರಿ. ನಂತರ ಒಣ ಮೆಣಸಿನ ಕಾಯಿ ಹಾಕಿ ಫ್ರೈ ಮಾಡಿ. ನಂತರ ಇದು ತಣ್ಣಗಾಗಲು ಬಿಡಿ.
  • ನಂತರ ಇದನ್ನು ಒಂದು ಮಿಕ್ಸಿ ಜಾರಿಗೆ ಹಾಕಿ. ಅದಕ್ಕೆ ಜೀರಿಗೆ, ಬೆಳ್ಳುಳ್ಳಿ, ಮಾವಿನಕಾಯಿ, ಉಪ್ಪು, ತೆಂಗಿನ ತುರಿ ಹಾಗೂ ಸ್ವಲ್ಪ ಬೆಲ್ಲ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.
  • ನಂತರ ಒಂದು ಒಗ್ಗರಣೆ ಪಾತ್ರೆಗೆ ಎಣ್ಣೆ ಹಾಕಿ ಅದಕ್ಕೆ ಸಾಸಿವೆ, ಇಂಗು, 2 ಒಣಮೆಣಸು, ಕರಿಬೇವು ಹಾಕಿ. ಅದು ಕೆಂಪಗಾದಾಗ ರುಬ್ಬಿಕೊಂಡ ಚಟ್ನಿಗೆ ಹಾಕಿ, ಕಡಿಮೆ ಉರಿಯಲ್ಲಿ 5 ನಿಮಿಷಗಳ ಕಾಲ ಬೇಯಿಸಿಕೊಂಡರೆ ರುಚಿಕರವಾದ ಮಾವಿನ ಚಟ್ನಿ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel