ಪನೀರ್ ಪಕೋಡಾ 
ಅಡುಗೆ

ಪನೀರ್ ಪಕೋಡಾ

ರುಚಿಕರವಾದ ಪನೀರ್ ಪಕೋಡಾ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಪನೀರ್ ಕ್ಯೂಬ್ಸ್ – 500 ಗ್ರಾಂ
  • ಕಡ್ಲೆ ಹಿಟ್ಟು – 1 ಬಟ್ಟಲು
  • ಕಾರ್ನ್ ಫ್ಲೋರ್- 3-4 ಚಮಚ
  • ಅಚ್ಚಖಾರದ ಪುಡಿ – 1 ಚಮಚ
  • ಅರಶಿಣದ ಪುಡಿ– 1 ಚಮಚ
  • ಉಪ್ಪು – ರುಚಿಗೆ ತಕ್ಕಷ್ಟು
  • ಜೀರಿಗೆ ಪುಡಿ – ಅರ್ಧ ಚಮಚ
  • ಅಡುಗೆ ಸೋಡಾ – 1 ಚಮಚ
  • ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
  • ಚಾಟ್ ಮಸಾಲ – ಸ್ವಲ್ಪ

ಮಾಡುವ ವಿಧಾನ...

  • ಮೊದಲಿಗೆ ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟು ಹಾಗೂ ಕಾರ್ನ್ ಫ್ಲೋರ್ ಹಾಕಿಕೊಂಡು ಅದಕ್ಕೆ ನೀರು, ಅಚ್ಚಖಾರದ ಪುಡಿ, ಜೀರಿಗೆ ಪುಡಿ, ಉಪ್ಪು, ಅರಶಿಣ ಮತ್ತು ಸೋಡಾ ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಂಡು ದಪ್ಪ ಮಿಶ್ರಣವನ್ನು ಮಾಡಿಕೊಳ್ಳಿ.
  • ಇದೀಗ ಪನೀರ್ ಕ್ಯೂಬ್ಸ್ ಅನ್ನು ಹಾಕಿ, ಈ ಮಿಶ್ರಣದಲ್ಲಿ ಚನ್ನಾಗಿ ಅದ್ದಿ ಮಿಶ್ರಣದೊಂದಿಗೆ ಪನೀರ್ ಚನ್ನಾಗಿ ಹೊಂದಿಕೊಳ್ಳುವಂತೆ ಕೋಟಿಂಗ್ ಮಾಡಿ.
  • ಬಳಿಕ ಒಂದು ಬಾಣಾಲೆಯಲ್ಲಿ ಸ್ವಲ್ಪ ಎಣ್ಣೆ ಬಿಸಿಗಿಟ್ಟು, ಕಾದ ಬಳಿಕ ಅದಕ್ಕೆ ಕಡ್ಲೆಹಿಟ್ಟಿನ ಮಿಶ್ರಣದಲ್ಲಿ ಅದ್ದಿದ ಪನೀರ್ ಕ್ಯೂಬ್ಸ್ ಅನ್ನು ಹಾಕಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಿ. ಅದೇ ರೀತಿ ಎಲ್ಲಾ ಪನೀರ್ ಕ್ಯೂಬ್ಸ್‌ಗಳನ್ನು ಫ್ರೈ ಮಾಡಿ.
  • ನಂತರ ಅದನ್ನು ಎಣ್ಣೆಯಿಂದ ತೆಗೆದು ಅದರ ಮೇಲೆ ಸ್ವಲ್ಪ ಚಾಟ್ ಮಸಾಲ ಪುಡಿಯನ್ನು ಹಾಕಿಕೊಂಡು ಕೆಚಪ್ ಅಥವಾ ಗ್ರೀನ್ ಚಟ್ನಿಯೊಂದಿಗೆ ಸವಿಯಿರಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!