ಸೋಯಾ ಬೀನ್ ಕಬಾಬ್- Soya bean kebab Recipe in Kannada
ರುಚಿಕರವಾದ ಸೋಯಾ ಬೀನ್ ಕಬಾಬ್ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
ಸೋಯಾ ಬೀನ್- 20-25
ಶುಂಠಿ-ಬೆಳ್ಳುಳ್ಳಿ ಪೇಸ್ಟ್-2 ಚಮಚ
ಹಸಿ ಮೆಣಸಿನಕಾಯಿ-2
ಈರುಳ್ಳಿ- 3
ಮೊಸರು-ಸ್ವಲ್ಪ
ಕೊತ್ತಂಬರಿ ಸೊಪ್ಪು- ಸ್ವಲ್ಪ
ಖಾರದ ಪುಡಿ- ಒಂದು ಚಮಚ
ಗರಂ ಮಸಾಲ- ಒಂದೂವರೆ ಚಮಚ
ಕಾಳು ಮೆಣಸಿನ ಪುಡಿ- 1 ಚಮಚ
ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು
ಉಪ್ಪು- ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
ಸೋಯಾ ಬೀನ್ ಅನ್ನು 20-25 ನಿಮಿಷ ಬಿಸಿ ನೀರಿನಲ್ಲಿ ನೆನೆಸಿ. ಬಳಿಕ ಹಸಿ ಮೆಣಸಿನಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪನ್ನು ಮಿಕ್ಸಿ ಜಾರಿಗೆ ಹಾಕಿ ಪೇಸ್ಟ್ ಮಾಡಿಟ್ಟುಕೊಳ್ಳಿ. ನಂತರ ಇದೇ ಮಿಕ್ಸಿ ಜಾರಿಗೆ ನೆನೆಸಿದ ಸೋಯಾ ಬೀನ್ ಹಾಕಿ ರುಬ್ಬಿಕೊಳ್ಳಿ. ಇದಕ್ಕೆ ಶುಂಠಿ- ಬೆಳ್ಳುಳ್ಳಿ ಪೇಸ್ಟ್. ಖಾರದ ಪುಡಿ, ಗರಂ ಮಸಾಲ, 2 ಚಮಚ ಮೊಸರು, ಕಾಳು ಮೆಣಸಿನ ಪುಡಿ, ಉಪ್ಪು, ಕೊತ್ತಂಬರಿ ಸೊಪ್ಪು ಹಾಕಿ ಮಿಶ್ರಣ ಮಾಡಿ ಅರ್ಧ ಗಂಟೆ ನೆನೆಯಲು ಬಿಡಿ.
ಪ್ಯಾನ್ ಬಿಸಿ ಮಾಡಿ, ಅದರಲ್ಲಿ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಮಸಾಲೆಯುಕ್ತ ಸೋಯಾ ಬೀನ್ ನಿಮಗೆ ಬೇಕಾಗ ಆಕಾರದಲ್ಲಿ ತಟ್ಟಿ ಎಣ್ಣೆ ಹಾಕಿ 10 ನಿಮಿಷ ಫ್ರೈ ಮಾಡಿದರೆ ರುಚಿಯಾದ ಸೋಯಾ ಬೀನ್ ಕಬಾಬ್ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.