ಚಿಕನ್ ಪೆಪ್ಪರ್ ಫ್ರೈ- Chicken pepper fry Recipe in Kannada
ರುಚಿಕರವಾದ ಚಿಕನ್ ಪೆಪ್ಪರ್ ಫ್ರೈ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
ಕೋಳಿಮಾಂಸ – 1/2 ಕೆಜಿ
ಕಾಳುಮೆಣಸಿನಪುಡಿ – 1 ಚಮಚ
ದನಿಯಾಪುಡಿ – 2 ಚಮಚ
ಅಚ್ಚಖಾರದ ಪುಡಿ- ಅರ್ಧ ಚಮಚ
ಈರುಳ್ಳಿ – 2
ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಹಸಿಮೆಣಸಿನಕಾಯಿ – 2
ಕೊತ್ತಂಬರಿಸೊಪ್ಪು – ಸ್ವಲ್ಪ
ಕರೀಬೇವು – ಸ್ವಲ್ಪ
ಅರಿಸಿನಪುಡಿ – ಚಿಟಿಕೆ
ಉಪ್ಪು – ರುಚಿಗೆ ತಕ್ಕಷ್ಟು
ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
ಚಕ್ಕೆ-ಲವಂಗ ಪುಡಿ- ಕಾಲು ಚಮಚ
ಮಾಡುವ ವಿಧಾನ...
ಕೋಳಿ ಮಾಂಸವನ್ನು ಚೆನ್ನಾಗಿ ತೊಳೆದಕೊಳ್ಳಿ. ಒಲೆಯ ಮೇಲೆ ಬಾಣಲೆ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ. ಕಾದ ನಂತರ ಈರುಳ್ಳಿ, ಕರಿಬೇವು, ಹಸಿಮೆಣಸಿನ ಕಾಯಿ ಹಾಕಿ. ಈರುಳ್ಳಿ ಕೆಂಪಗಾಗುತ್ತಿದ್ದಂತೆಯೇ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ.
2 ನಿಮಿಷದ ಬಳಿಕ ಕೋಳಿಮಾಂಸ ಹಾಗೂ ಉಪ್ಪು ಹಾಕಿ 5 ನಿಮಿಷ ಫ್ರೈ ಮಾಡಿ, ಬಳಿಕ ಕಾಳು ಮೆಣಸಿನ ಪುಡಿ, ದನಿಯಾ ಪುಡಿ, ಅಚ್ಚ ಖಾರದ ಪುಡಿ ಹಾಗೂ ಚಕ್ಕೆ-ಲವಂಗ ಪುಡಿ ಹಾಕಿ. ಸ್ವಲ್ಪ ನೀರು ಹಾಕಿ 5 ನಿಮಿಷ ಬೇಯಲು ಬಿಡಿ. ಇದೀಗ ಕೊತ್ತಂಬರಿಸೊಪ್ಪಿನಿಂದ ಅಲಂಕರಿಸಿದರೆ ಪೆಪ್ಪರ್ ಚಿಕನ್ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.