ನುಗ್ಗೆ ಸೊಪ್ಪಿನ ಬೋಂಡಾ - Nugge Sopa Bonda Recipe in Kannada
ರುಚಿಕರವಾದ ನುಗ್ಗೆ ಸೊಪ್ಪಿನ ಬೋಂಡಾ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
ಈರುಳ್ಳಿ-1/4 ಕೆ.ಜಿ
ಕಡಲೆ ಹಿಟ್ಟು- 1 ಬಟ್ಟಲು
ಹಸಿ ಮೆಣಸಿನಕಾಯಿ-10
ಕೊತ್ತಂಬರಿ ಸೊಪ್ಪು- ಸ್ವಲ್ಪ
ನುಗ್ಗೆ ಸೊಪ್ಪು- 1 ಬಟ್ಟಲು
ಕಾರ್ನ್ಪ್ಲೋರ್- 1 ಚಮಚ
ಉಪ್ಪು- ರುಚಿಗೆ ತಕ್ಕಷ್ಟು
ಎಣ್ಣೆ-ಕರಿಯಲು ಅಗತ್ಯವಿದ್ದಷ್ಟು
ಮಾಡುವ ವಿಧಾನ...
ಈರುಳ್ಳಿ ಕೊತ್ತಂಬರಿ ನುಗ್ಗೆಸೊಪ್ಪು ಹಸಿಮೆಣಸಿನಕಾಯಿಯನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಿ.
ಕತ್ತರಿಸಿಟ್ಟುಕೊಂಡ ಪದಾರ್ಥಗಳು ಕಡಲೆಹಿಟ್ಟು ಕಾರ್ನ್ಫ್ಲೌರ್ ಉಪ್ಪು ಮತ್ತು ಸ್ವಲ್ಪ ನೀರನ್ನು ಹಾಕಿ ಬೋಂಡಾ ಹಿಟ್ಟಿನ ಹದಕ್ಕೆ ಕಲಸಿ ಹುಂಡೆಯಾಕಾರದಲ್ಲಿ ಮಾಡಿ ಕಾದ ಎಣ್ಣೆಗೆ ಹಾಕಿ ಹದ ಉರಿಯಲ್ಲಿ ಕರಿದರೆ ರುಚಿಕರವಾದ ನುಗ್ಗೆ ಸೊಪ್ಪಿನ ಬೋಂಡಾ ಸವಿಯಲು ಸಿದ್ಧ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.