ಅಡುಗೆ

ಎಗ್ ಸ್ಯಾಂಡ್‌ವಿಚ್‌ - Egg sandwich Recipe in Kannada

ರುಚಿಕರವಾದ ಎಗ್ ಸ್ಯಾಂಡ್‌ವಿಚ್‌ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಮೊಟ್ಟೆ- 4

  • ಬ್ರೆಡ್ ತುಂಡು- 4

  • ಟೊಮೆಟೊ- 1

  • ಈರುಳ್ಳಿ- 2

  • ಹಸಿ ಮೆಣಸಿನಕಾಯಿ- 2

  • ಕೊತ್ತಂಬರಿ ಸೊಪ್ಪು- ಸ್ವಲ್ಪ

  • ಹಾಲು- 2 ಚಮಚ

  • ಎಣ್ಣೆ- 1 ಚಮಚ

  • ಬೆಣ್ಣೆ- 1 ಚಮಚ

  • ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ...

  • ಮೊಟ್ಟೆಯನ್ನು ಒಡೆದು ಒಂದು ಬಟ್ಟಲಿನಲ್ಲಿ ಹಾಕಿ ಚೆನ್ನಾಗಿ ಕಲಸಬೇಕು. ಅದಕ್ಕೆ ಹಾಲು ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಬೇಕು. ನಂತರ ಸಣ್ಣದಾಗಿ ಕತ್ತರಿಸಿದ ಹಸಿ ಮಣಸಿನಕಾಯಿ, ಟೊಮೆಟೊ ಮತ್ತು ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕ ಉಪ್ಪು ಹಾಕಿ ಮತ್ತೊಮ್ಮೆ ಚೆನ್ನಾಗಿ ಕಲಸಬೇಕು.

  • ಒಂದು ಪ್ಯಾನ್‌ನಲ್ಲಿ ಎಣ್ಣೆ ಹಾಕಿ ಬಿಸಿಯಾದಾಗ ಸಣ್ಣದಾಗಿ ಕತ್ತರಿಸಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಅದಕ್ಕೆ ಮೊಟ್ಟೆಯ ಮಿಶ್ರಣವನ್ನು ಹಾಕಿ ಕಮ್ಮಿ ಉರಿಯಲ್ಲಿ ಫ್ರೈ ಮಾಡಬೇಕು. ಮೊಟ್ಟೆ ಫ್ರೈ ಆದ ನಂತರ ಉರಿಯಿಂದ ತೆಗೆದು ಬದಿಯಲ್ಲಿಡಿ.

  • ಎರಡು ಬ್ರೆಡ್‌ ತುಂಡುಗಳ ಒಂದೊಂದು ಬದಿಯಲ್ಲಿ ಬೆಣ್ಣೆ ಸವರಿ ಅದರ ಮಧ್ಯದಲ್ಲಿ ಮೊಟ್ಟೆ ಫ್ರೈಯನ್ನು ಇಟ್ಟು ಸ್ವಲ್ಪ ಬಿಸಿಯಾದ ತವಾ ಮೇಲೆ ಇಟ್ಟು ಕಂದು ಬಣ್ಣಕ್ಕೆ ತಿರುಗಿದಾಗ ತೆಗೆದರೆ ರುಚಿಯಾದ ಎಗ್ ಸ್ಯಾಂಡ್‌ವಿಚ್‌ ಸವಿಯಲು ಸಿದ್ಧ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT