ನಿಂಬೆಹಣ್ಣು 
ಆರೋಗ್ಯ-ಜೀವನಶೈಲಿ

ವಾಮಾಚಾರಕ್ಕೆ ಮಾತ್ರ ಸೀಮಿತವಲ್ಲ ನಿಂಬೆಹಣ್ಣು

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು...

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ,  ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು. ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ. ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ.

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ. ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ.

ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ಇನ್ನು ನಿಂಬೆಹಣ್ಣಿನಲ್ಲಿ  ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ. ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.

ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ. ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ. ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು. ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ. ನಿಂಬೆ ಹಣ್ಣಿಗೆ ಒಂದು ಹನಿ ಜೇನುತುಪ್ಪ ಬೆರೆಸಿ, ಮುಖಕ್ಕೆ ಹಚ್ಚಿ 15 ನಿಮಿಷಗಳ ನಂತರ ತೊಳೆದರೆ ಮುಖದ ಮೇಲಿನ ಕಪ್ಪು ಕಲೆಗಳು ಮಾಯವಾಗುತ್ತದೆ. ಹಾಗೂ ಚರ್ಮ ಕಾಂತಿಯುತವಾಗಿರುತ್ತದೆ. ಡೆಡ್ ಸ್ಕಿನ್ ತೆಗೆಯಲು ನಿಂಬೆ ಹಣ್ಣು ಉತ್ತಮ ಔಷಧ.

ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ. ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಕಾರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT