ಎನರ್ಜಿ ಡ್ರಿಂಕ್ಸ್‌ 
ಆರೋಗ್ಯ-ಜೀವನಶೈಲಿ

ಎನರ್ಜಿ ಡ್ರಿಂಕ್ಸ್ ಸೇವನೆಯಿಂದ ಅಧಿಕ ರಕ್ತದೊತ್ತಡ

ದೇಹಕ್ಕೆ ಚೈತನ್ಯ ನೀಡುವ ಪಾನೀಯಗಳು ಅಧಿಕ ರಕ್ತದೊತ್ತಡಕ್ಕೆ ಕಾರಣ ಎಂದು ಅಧ್ಯಯನ ತಂಡವೊಂದು ಸಾಬೀತು ಪಡಿಸಿದೆ...

ದೇಹಕ್ಕೆ ಚೈತನ್ಯ ನೀಡುವ ಪಾನೀಯಗಳು ಅಧಿಕ ರಕ್ತದೊತ್ತಡಕ್ಕೆ ಕಾರಣ ಎಂದು ಅಧ್ಯಯನ ತಂಡವೊಂದು ಸಾಬೀತು ಪಡಿಸಿದೆ. ದೇಹ ದಣಿದಾಗ ಬೇಗನೆ ಉತ್ಸಾಹ ಸಿಗಲು ಯುವ ಜನತೆ ಎನರ್ಜಿ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಿದ್ದು, ಇದು ಆರೋಗ್ಯಕ್ಕೆ ಉತ್ತಮವಲ್ಲ.

19 ಮತ್ತು 40ರ ಹರೆಯದ ನಡುವೆ ಇರುವ 25 ಆರೋಗ್ಯವಂತ ವ್ಯಕ್ತಿಗಳನ್ನು ಅಮೆರಿಕದ ಮಯೋ ಕ್ಲಿನಿಕ್‌ನ ವಿಜ್ಞಾನಿಗಳು ಅಧ್ಯಯನಕ್ಕೊಳಪಡಿಸಿದ್ದರು.
ಈ ರೀತಿಯ ಪಾನೀಯಗಳನ್ನು ಸೇವಿಸುವ ವ್ಯಕ್ತಿಗಳಿಗೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಅಧಿಕವಾಗಿರುತ್ತದೆ.

ಇಂಥಾ ಪಾನೀಯಗಳನ್ನು ಸೇವಿಸುವ ಮುನ್ನ ಮತ್ತು ಸೇವಿಸಿದ ನಂತರ ಈ ವ್ಯಕ್ತಿಗಳನ್ನು ಆರೋಗ್ಯ ತಪಾಸಣೆಗೊಳಪಡಿಸಿದಾಗ ಇವರ ರಕ್ತದೊತ್ತಡದಲ್ಲಿ ಭಾರೀ ಬದಲಾವಣೆಗಳು ಕಂಡು ಬಂತು ಎಂದು ಅಧ್ಯಯನ ತಂಡ ಹೇಳಿದೆ.

ಅಮೆರಿಕದ ಕಾಲೇಜ್ ಆಫ್ ಕಾರ್ಡಿಯಾಲಜಿ ವಾರ್ಷಿಕ ಸಮ್ಮೇಳನದಲ್ಲಿ ಈ ಅಧ್ಯಯನ ವರದಿ ಮಂಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?