ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಆರೋಗ್ಯ-ಜೀವನಶೈಲಿ

ಮಾರಕ ಡೆಂಗ್ಯೂ ಗೆ ಶೀಘ್ರವೇ ಭಾರತೀಯ ಲಸಿಕೆ: ವಿಜ್ಞಾನಿಗಳ ವಿಶ್ವಾಸ

ದೇಶಾದ್ಯಂತ ಎಲ್ಲೆಡೆ ಕಾಡುತ್ತಿರುವ ಮಹಾಮಾರಿ ಡೆಂಗ್ಯೂ ರೋಗಕ್ಕೆ ಭಾರತೀಯ ಲಸಿಕೆ ಕಂಡು ಹಿಡಿಯಲು ಭಾರತದ ವಿಜ್ಞಾನಿಗಳು ಮುಂದಾಗಿದ್ದಾರೆ. ...

ಸಾಂದರ್ಭಿಕ ಚಿತ್ರ
Shilpa D
Updated On : 16 Sept 2015, 4:03 am

ನವದೆಹಲಿ: ದೇಶಾದ್ಯಂತ ಎಲ್ಲೆಡೆ ಕಾಡುತ್ತಿರುವ ಮಹಾಮಾರಿ ಡೆಂಗ್ಯೂ ರೋಗಕ್ಕೆ ಭಾರತೀಯ ಲಸಿಕೆ ಕಂಡು ಹಿಡಿಯಲು ಭಾರತದ ವಿಜ್ಞಾನಿಗಳು ಮುಂದಾಗಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಲಸಿಕೆ ಕಂಡು ಹಿಡಿಯುವುದಾಗಿ ಭಾರತೀಯ ಪ್ರಯೋಗಾಲಯದ ವಿಜ್ಞಾನಿಗಳು ಭರವಸೆ ನೀಡಿದ್ದಾರೆ.

ಈಗಾಗಲೇ ಭಾರತೀಯ ಲಸಿಕೆ ಕಂಡು ಹಿಡಿಯಲು ಸಂಶೋಧನೆ ನಡೆಸಲಾಗುತ್ತಿದ್ದು, ಕೋತಿಗಳ ಮೇಲೆ ಪ್ರಯೋಗ ನಡೆಸಲಾಗಿದೆ.  ಮನುಷ್ಯರ ಮೇಲೆ ಇದರ ಪ್ರಯೋಗ ನಡೆಸಲು ತುಂಬಾ ಸಮಯ ತೆಗೆದು ಕೊಳ್ಳುತ್ತದೆ. ಎಲ್ಲವನ್ನು ಒಂದು ಯೋಜಿತ ರೀತಿಯಲ್ಲಿ ಮಾಡಬೇಕು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಡೆಂಗ್ಯೂಗೆ ಲಸಿಕೆ  ತಯಾರಿಸಲು ಐದು ವರ್ಷಗಳ ಹಿಂದೆಯೇ  8 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಬಗ್ಗೆ ಎಲ್ಲಿಯೂ ಮಾಹಿತಿ ಹೊರ ಹಾಕದಂತೆ ಎಚ್ಚರ ವಹಿಸಲಾಗಿತ್ತು. ಆದರೆ ಹಿಂದಿನ ತಿಂಗಳು ಈ ಲಸಿಕೆಗೆ ಅಂತಾರಾಷ್ಟ್ರೀಯ ಪೇಟೆಂಟ್ ದೊರಕಿದೆ.

ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಜ್ವರ ಬರಲಿದೆ. ಈ ಜ್ವರ ಬಂದ ಕೆಲವರು ಚೇತರಿಸಿಕೊಂಡರೆ ಕೆಲವರು ಸಾವನ್ನಪ್ಪುತ್ತಾರೆ. ಹೀಗಾಗಿ ಶೀಘ್ರವೇ ಡೆಂಗ್ಯೂ ಲಸಿಕೆ ಕಂಡು ಹಿಡಿಯುವುದಾಗಿ ಭಾರತೀಯ ವಿಜ್ಞಾನಿಗಳ ತಂಡ ವಿಶ್ವಾಸ ವ್ಯಕ್ತ ಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments