ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಪ್ರತೀ ವರ್ಷ ವಾಯುಮಾಲಿನ್ಯದಿಂದಾಗಿ ಸಾವಿಗೀಡಾಗುವವರ ಸಂಖ್ಯೆ 5.5 ಮಿಲಿಯನ್

ವಾಯು ಮಾಲಿನ್ಯದಿಂದಾಗಿ ವಿಶ್ವದಲ್ಲಿ ಪ್ರತೀ ವರ್ಷ 5.5 ದಶಲಕ್ಷ ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಅಧ್ಯಯನ ವರದಿಯೊಂದರಲ್ಲಿ ಹೇಳಲಾಗಿದೆ...

ನವದೆಹಲಿ: ವಾಯು ಮಾಲಿನ್ಯದಿಂದಾಗಿ ವಿಶ್ವದಲ್ಲಿ ಪ್ರತೀ ವರ್ಷ 5.5 ದಶಲಕ್ಷ ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಅಧ್ಯಯನ ವರದಿಯೊಂದರಲ್ಲಿ ಹೇಳಲಾಗಿದೆ. ಸಾವಿಗೀಡಾಗುವವರಲ್ಲಿ ಶೇ. 55 ಮಂದಿ ಭಾರತ ಮತ್ತು ಚೀನಾ ದೇಶದವರಾಗಿದ್ದಾರೆ. ವಾಯು ಮಾಲಿನ್ಯದಿಂದಾಗಿ 2013ರಕಲ್ಲಿ 1.6 ದಶಲಕ್ಷ ಜನರು ಚೀನಾದಲ್ಲಿಯೂ  1.4 ದಶಲಕ್ಷ ಜನರು ಭಾರತದಲ್ಲಿ ಅಸು ನೀಗಿದ್ದಾರೆ.
ಮುಂಬರುವ ಎರಡು ದಶಕಗಳಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸದೇ ಹೋದರೆ ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ. ಭಾರತ, ಚೀನಾ, ಅಮೆರಿಕ, ಕೆನಡಾ ಮೊದಲಾದ ದೇಶಗಳ ತಜ್ಞರು ಈ ಅಧ್ಯಯನ ತಂಡದಲ್ಲಿ ಭಾಗಿಯಾಗಿದ್ದರು. ಈ ವಾಯುಮಾಲಿನ್ಯವೇ ಅಕಾಲಮೃತ್ಯುಗೆ ಕಾರಣವಾಗುತ್ತಿದೆ ಎಂದು ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.
ವಾಷಿಂಗ್ಟನ್‌ನಲ್ಲಿ ನಡೆದ ಅಮೆರಿಕನ್ ಅಸೋಸಿಯೇಷನ್ ಫಾರ್ ಅಡ್ವಾನ್ಸ್‌ಮೆಂಟ್ ಆಫ್ ಸಯನ್ಸ್‌ನ ವಾರ್ಷಿಕ ಸಮ್ಮೇಳನದಲ್ಲಿ ಈ ವರದಿಯನ್ನು ಮಂಡಿಸಲಾಗಿತ್ತು. ಜಗತ್ತಿನಲ್ಲಿ ಜನರ ಸಾವಿಗೆ ವಾಯುಮಾಲಿನ್ಯವೂ ಕೂಡಾ ಪ್ರಧಾನ 4 ಕಾರಣಗಳಲ್ಲೊಂದು ಎಂದು ಹೇಳಲಾಗಿದೆ.
ಅಣು ಸ್ಥಾವರಗಳಿಂದ, ಕಾರ್ಖಾನೆ ಮತ್ತು ವಾಹಗಳಿಂದ ಬರುವ ಹೊಗೆಗಳಿಂದಾಗಿ ವಾಯು ಮಾಲಿನ್ಯ ಜಾಸ್ತಿಯಾಗುತ್ತಿದೆ. ಅದೇ ವೇಳೆ ಭಾರತದಲ್ಲಿ ಕಟ್ಟಿಗೆಯ ಉರಿಯುವಿಕೆಯಿಂದ ಮಲಿನೀಕರಣ ಹೆಚ್ಚುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಚೀನಾದಲ್ಲಿ ವಾಯು ಮಾಲಿನ್ಯಕ್ಕೆ ಪ್ರಧಾನ ಕಾರಣ ಕಲ್ಲಿದ್ದಲು ಉರಿಯುವಿಕೆಯಾಗಿದೆ. ಈ ವಾಯು ಮಾಲಿನ್ಯದಿಂದಾಗಿ 2013ರಲ್ಲಿ  366,000 ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಈ ಮಾಲಿನ್ಯವನ್ನು ನಿಯಂತ್ರಿಸದೇ ಹೋದರೆ ಭಾರತ ಮತ್ತು ಚೀನಾ ತೀವ್ರ ಪರಿಣಾಮ ಎದುರಿಸಬೇಕಾಗಿ ಬರುತ್ತದೆ ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!