ಸಾಂದರ್ಭಿಕ ಚಿತ್ರ 
ಆರೋಗ್ಯ

ಸಕ್ಕರೆ ಕಾಯಿಲೆ ಜೀವಿತಾವಧಿಯನ್ನು 9 ವರ್ಷ ಕಡಿಮೆ ಮಾಡುತ್ತದೆ: ಅಧ್ಯಯನ

ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರ ಸರಾಸರಿ ಜೀವಿತದ ವಯಸ್ಸು 9 ವರ್ಷಗಳಷ್ಟು...

ಬೀಜಿಂಗ್: ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರ ಸರಾಸರಿ ಜೀವಿತದ ವಯಸ್ಸು 9 ವರ್ಷಗಳಷ್ಟು ಕಡಿಮೆಯಾಗುತ್ತದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಾಗಿದ್ದು ಸರಿಯಾದ ಚಿಕಿತ್ಸೆ ನೀಡದಿರುವುದು ಇದಕ್ಕೆ ಕಾರಣ ಎಂದು ಚೀನಾದಲ್ಲಿ ನಡೆಸಿದ ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಡಯಾಬಿಟಿಸ್ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಅದರಿಂದ ಮರಣ ಪ್ರಮಾಣ  ಎಷ್ಟಾಗಿದೆ ಎಂಬುದು ತಿಳಿದುಬಂದಿಲ್ಲ.ಇಂಗ್ಲೆಂಡಿನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಚೀನಾದ ಪೆಕಿಂಗ್ ವಿಶ್ವವಿದ್ಯಾಲಯದ ಸಂಶೋಧಕರು 30ರಿಂದ 79 ವರ್ಷ ವಯಸ್ಸಿನ ಸಕ್ಕರೆ ಕಾಯಿಲೆಗೆ ತುತ್ತಾಗಿರುವವರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ.
ಚೀನಾದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರನ್ನು 2004ರಿಂದ 2008ರವರೆಗೆ ಅಧ್ಯಯನಕ್ಕೊಳಪಡಿಸಲಾಗಿದ್ದು, 2014ರಲ್ಲಿ ಸಾವಿಗೆ ನಿಖರ ಕಾರಣಗಳೇನೆಂಬುದನ್ನು ತಿಳಿಯಲಾಯಿತು.
ಅಧ್ಯಯನದಿಂದ ತಿಳಿದುಬಂದ ಅಂಶವೆಂದರೆ ಡಯಾಬಿಟಿಸ್ ನಿಂದ ಬಳಲುತ್ತಿರುವ ಜನರು ಇತರರಿಗಿಂತ ಬೇಗ ಸಾಯುವ ಸಾಧ್ಯತೆ ಎರಡು ಪಟ್ಟು ಹೆಚ್ಚಾಗಿದೆ.ಡಯಾಬಿಟಿಸ್ ನಿಂದ ಹೃದಯ ಕಾಯಿಲೆ, ಪಾರ್ಶ್ವವಾಯು, ಕಿಡ್ನಿ ತೊಂದರೆ, ಕರುಳು ಸಮಸ್ಯೆ, ಸೋಂಕು, ಯಕೃತ್ತು, ಮೇದೋಜೀರಕ ಗ್ರಂಥಿ ಮತ್ತು ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಯಿದೆ.
ಸಕ್ಕರೆ ಕಾಯಿಲೆ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿ ಹೆಚ್ಚಿದ್ದರೂ ಕೂಡ ಅದರಿಂದುಂಟಾಗುವ ಆರೋಗ್ಯದ ಅಪಾಯಗಳು ಗ್ರಾಮೀಣ ಪ್ರದೇಶಗಳಲ್ಲಿ ಜಾಸ್ತಿಯಾಗಿರುತ್ತದೆ.
ಸಕ್ಕರೆ ಕಾಯಿಲೆಗೆ ಸರಿಯಾದ ಚಿಕಿತ್ಸೆ ಪಡೆಯದಿರುವುದರಿಂದ ಅದರಿಂದ ಇತರ ಕಾಯಿಲೆ ಬಂದು ಸಾಯುವವರ ಸಂಖ್ಯೆ ಗ್ರಾಮೀಣ ಪ್ರದೇಶಗಳಲ್ಲಿ ನಗರ ಪ್ರದೇಶಗಳಿಗಿಂತ ನಾಲ್ಕು ಪಟ್ಟು ಜಾಸ್ತಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

SCROLL FOR NEXT