ಸ್ಯಾನಿಟೈಸರ್ 
ಆರೋಗ್ಯ

ಸ್ಯಾನಿಟೈಸರ್ ಸೇವನೆ ಸೂಕ್ತವಲ್ಲ: ಲಿವರ್ ಗೆ ಹಾನಿ, ಬಹು ಅಂಗಾಂಗ ವೈಫಲ್ಯವಾಗುತ್ತೆ!

ಮದ್ಯ ಸಿಗದ ಕಾರಣಕ್ಕೆ ಕೆಲವರು ಕೆಮ್ಮೆ ಸಿರಪ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸೇವಿಸುತ್ತಿದ್ದು, ಮತ್ತೇರಿಸಿಕೊಳ್ಳಲು ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ. ಆದರೆ ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್ ಸೇವನೆಯನ್ನು ಲಾಕ್ ಡೌನ್ ಸಂದರ್ಭದಲ್ಲಿ ಚಟವನ್ನಾಗಿ ಮಾಡಿಕೊಂಡಿದ್ದಾರೆ

ಬೆಂಗಳೂರು: ಮದ್ಯ ಸಿಗದ ಕಾರಣಕ್ಕೆ ಕೆಲವರು ಕೆಮ್ಮೆ ಸಿರಪ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸೇವಿಸುತ್ತಿದ್ದು, ಮತ್ತೇರಿಸಿಕೊಳ್ಳಲು ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ. ಆದರೆ ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್ ಸೇವನೆಯನ್ನು ಲಾಕ್ ಡೌನ್ ಸಂದರ್ಭದಲ್ಲಿ ಚಟವನ್ನಾಗಿ ಮಾಡಿಕೊಂಡಿದ್ದಾರೆ

ಈ ಕುರಿತು ಹಲವೆಡೆ ವರದಿಗಳು ಸಹ ಆಗುತ್ತಿವೆ. ಆದರೆ ತಜ್ಞರ ಪ್ರಕಾರ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್‌ಗಳು ಬಾಹ್ಯ ಉಪಯೋಗಕ್ಕೆ ಮಾತ್ರ ಸೀಮಿತ. ಯಾವುದೇ ಕಾರಣಕ್ಕೂ ಸೇವನೆಗೆ ಯೋಗ್ಯವಲ್ಲ. ಇದರಿಂದ ಲಿವರ್ ಗೆ ಗಂಭೀರ ಹಾನಿಯಾಗುತ್ತದೆ. ಇದು ಹಾಗೇಯೇ ಮುಂದುವರೆದರೆ ಇದು ಬಹು ಅಂಗಾಂಗಗಳ ವೈಫಲ್ಯಕ್ಕೂ ಕಾರಣವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಎಚ್ಚರಿಕೆ ನೀಡಿದೆ

ಸ್ಯಾನಿಟೈಜರ್‌ ನಲ್ಲಿ ಅಲ್ಕೋಹಾಲ್ ಮಾತ್ರ ಇರುವುದಿಲ್ಲ. ಇದರಲ್ಲಿ ಶೇ.೯೫ ರಷ್ಟು ಇಥೈಲ್ ಅಲ್ಕೋಹಾಲ್, ಶೇ.೦.೧೨೫ ಹೈಡ್ರೋಜನ್ ಪೆರಾಕ್ಸೈಡ್, ಶೇ.೧.೪೫ ರಷ್ಟು ಗ್ಲಿಸರಾಲ್ ಒಳಗೊಂಡಿರುತ್ತದೆ. 

ಹೆಚ್ಚಿನ ಪ್ರಮಾಣದಲ್ಲಿ ಇಥೆನಾಲ್ ಇರುವುದರಿಂದ ಕುಡಿಯಲು ಇದು ಯಾವುದೇ ಕಾರಣಕ್ಕೂ ಯೋಗ್ಯವಲ್ಲ. ಇದರ ಸೇವನೆಯಿಂದ ಅನ್ನನಾಳ, ಜಠರ, ಸಣ್ಣಕರಳು, ದೊಡ್ಡಕರಳು, ಪಿತ್ತಜನಕಾಂಗ ಮತ್ತು ಮೇದೋಜಿರಕ ಗ್ರಂಥಿಗಳಿಗೆ ತೀವ್ರವಾದ ಹಾನಿಯಾಗುತ್ತದೆ. ಪ್ರಾಣಹಾನಿಯಾಗುವ ಸಾಧ್ಯತೆಗಳು ಇರುತ್ತವೆ

ಸ್ಯಾನಿಟೈಸರ್ ಹೊಟ್ಟೆಯಲ್ಲಿ ಹೋದರೆ ಅನ್ನನಾಳ ತೂತು ಬೀಳುತ್ತೆ, ಲೀವರ್‌ಗಳ ಕ್ರಿಯೆಗೂ ಧಕ್ಕೆ ಬರುತ್ತದೆ. ಮನುಷ್ಯ ಸಾಯುವ ಪರಿಸ್ಥಿತಿ ಬರಬಹುದು, ಆದ್ದರಿಂದ ಸ್ಯಾನಿಟೈಜರ್ ಸೇವಿಸಬಾರದು. ಇದು ಕುಡಿಯುವ ವಸ್ತು ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ,.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್