ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹೊರನಾಡು ಕನ್ನಡಿಗ

ಪುರಂದರ ಪ್ರಶಸ್ತಿಗೆ ಶಿವರಾಮ ಕಾಸರಗೋಡು ಆಯ್ಕೆ

Parashurama
Updated On : 4 Feb 2013, 6:24 am

ಕಾಸರಗೋಡು: ತಿರುಮಲ ತಿರುಪತಿ ದೇವಸ್ಥಾನಂ ದಾಸ ಸಾಹಿತ್ಯ ಪ್ರಾಜೆಕ್ಟ್‌ನ ಪ್ರತಿಷ್ಠಿತ ಪುರಂದರ ಪ್ರಶಸ್ತಿಗೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೇರಳ ರಾಜ್ಯ ದಾಸ ಸಾಹಿತ್ಯ ಪ್ರಚಾರಕ್ ಶಿವರಾಮ ಕಾಸರಗೋಡು ಅವರನ್ನು ಆಯ್ಕೆ ಮಾಡಲಾಗಿದೆಯೆಂದು ತಿರುಮಲ ತಿರುಪತಿ ದೇವಸ್ಥಾನಂ ದಾಸ ಸಾಹಿತ್ಯ ಪ್ರಾಜೆಕ್ಟ್‌ನ ವಿಶೇಷಾಧಿಕಾರಿ ಪಿ.ಆರ್. ಆನಂದ ತೀರ್ಥಾಚಾರ್ಯ ಪಗಡಾಲ್ ತಿಳಿಸಿದ್ದಾರೆ. ಕೇರಳ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಟಿ.ಟಿ.ಡಿ. ದಾಸ ಸಾಹಿತ್ಯ ಪ್ರಾಜೆಕ್ಟ್‌ನಲ್ಲಿ ನೋಂದಣಿಗೊಂಡಿರುವ ಸುಮಾರು ಎರಡು ಸಾವಿರ ಭಜನಾ ಮಂಡಳಿಗಳ ಮೂಲಕ ದಾಸ ಸಾಹಿತ್ಯವನ್ನು ಪ್ರಚಾರಪಡಿಸಿ ಮಠ, ಮಂದಿರ, ದೇವಸ್ಥಾನಗಳಲ್ಲಿ ನಿರಂತರವಾಗಿ ಸಮೂಹ ದಾಸ ಸಂಕೀರ್ತನಾ ಗಾಯನವನ್ನು ಹಾಡಲು ಪ್ರೋತ್ಸಾಹಿಸಿ, ದಾಸ ಸಾಹಿತ್ಯ ಸಂಘಟನಾ ಕ್ಷೇತ್ರಗಳಲ್ಲಿ ರಚನಾತ್ಮಕವಾಗಿ ತೊಡಗಿಸಿಕೊಂಡಿರುವ ಮಹನೀಯರ ಸಾಧನೆ ಗುರುತಿಸಿ 'ಪುರಂದರ ಪ್ರಶಸ್ತಿ' ನೀಡಿ ಗೌರವಿಸಲಾಗುತ್ತದೆ.
ತಿರುಮಲ ತಿರುಪತಿ ದೇವಸ್ಥಾನದ ಸನ್ನಿಧಾನದಲ್ಲಿ ನಡೆಯುವ ಪುರಂದರದಾಸ ಆರಾಧನೋತ್ಸವದ ಪ್ರಯುಕ್ತ -2013 ಫೆಬ್ರವರಿ 10ರಂದು ಬೆಳಗ್ಗೆ 10ಗಂಟೆಗೆ ಶಿವರಾಮ ಕಾಸರಗೋಡು ಅವರಿಗೆ ಪುರಂದರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments