ಹೊರನಾಡು ಕನ್ನಡಿಗ

ಮುಂಬೈನಲ್ಲಿ ಕಾರಂತೋತ್ಸವ

ಮುಂಬೈ: ಇಲ್ಲಿನ ಸದಾನಂದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸಂಘಗಳ ವತಿಯಿಂದ ಡಾ. ಶಿವರಾಮ ಕಾರಂತರ ಸ್ಮರಣಾರ್ಥ- ಕಾರಂತೋತ್ಸವವನ್ನು  ಮಾಟುಂಗಾ ಪಶ್ಚಿಮದಲ್ಲಿನ ಕರ್ನಾಟಕ ಸಂಘದಲ್ಲಿ ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿ ಮಂಗಳೂರಿನ ಶ್ರೀಗೋಕರ್ಣನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನರಸಿಂಹಮೂರ್ತಿ ಮಾತನಾಡಿ, 'ಕಾರಂತರಿಗೆ 8 ಗೌರವ ಡಾಕ್ಟರೇಟ್, ಅನೇಕ ಪ್ರಶಸ್ತಿಗಳನ್ನು ನೀಡಲಾಗಿದ್ದು, ಕಾರಂತರಿಂದಾಗಿ ಆ ಪ್ರಶಸ್ತಿಗಳ ಮೌಲ್ಯವೇ ಹೆಚ್ಚಾಯಿತು. ಹೊರತು ಕಾರಂತರ ಪರಿಪೂರ್ಣ ವ್ಯಕ್ತಿತ್ವಕ್ಕೆ ಯಾವುದೂ ಸಾಟಿಯಾಗಿರಲಿಲ್ಲ' ಎಂದರು.
ಕರ್ನಾಟಕ ಸಂಘದ ಅಧ್ಯಕ್ಷ ಡಾ.ಪಿ.ಜಿ. ಬುರ್ಡೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ನಿರ್ದೇಶಕ ಸದಾನಂದ ಸುವರ್ಣ, ಕಾರ್ಯದರ್ಶಿಎಸ್. ಕೆ. ಸುಂದರ್, ಖಜಾಂಜಿ ಪ್ರೊ.ಶಿವ ಬಿಲ್ಲವ, ಕಾರಂತೋತ್ಸವ ಸಮಿತಿಯ ಅಧ್ಯಕ್ಷ ಡಾ. ವ್ಯಾಸರಾವ್ ನಿಂಜೂರು ಮತ್ತಿತರರು ಉಪಸ್ಥಿತರಿದ್ದರು. ಕರ್ನಾಟಕ ಸಂಘದ ಗೌ. ಕಾರ್ಯದರ್ಶಿ ಓಂದಾಸ್ ಕಣ್ಣಂಗರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಉಪಾಧ್ಯಕ್ಷ ಡಾ.ಭರತ್ ಕುಮಾರ್ ಪೊಲಿಪು ಅತಿಥಿಯನ್ನು ಪರಿಚಯಿಸಿದರು. ಜಿ. ಪಿ ಕುಸುಮಾ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಗಾಭರಣ ನಿರ್ದೇಶನದ ಶಿವರಾಜ್‌ಕುಮಾರ್ ನಟಿಸಿರುವ ಶಿವರಾಮ ಕಾರಂತರ ಕಾದಂಬರಿ ಆಧಾರಿತ 'ಚಿಗುರಿದ ಕನಸು' ಕನ್ನಡ ಚಲನಚಿತ್ರ ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ನಡೆದ ಚಿತ್ರಕಲಾ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!