ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹೊರನಾಡು ಕನ್ನಡಿಗ

ಜೂ.8ರಿಂದ ಕಯ್ಯಾರ ಕಿಞಣ್ಣರೈ ಶತಮಾನೋತ್ಸವ ವರ್ಷಾಚರಣೆಯ ಕಾರ್ಯಕ್ರಮ

Mainashree
Updated On : 25 May 2014, 9:25 am

ಕಾಸರಗೋಡು: ನಾಡೋಜ ಡಾ. ಕಯ್ಯಾರ ಕಿಞಣ್ಣರೈ -100 ಜನ್ಮಶತಮಾನೋತ್ಸವ ವರ್ಷಾಚರಣೆಯ 100 ಸರಣಿ ಕಾರ್ಯಕ್ರಮಗಳನ್ನು ಅಖಿಲ ಭಾರತ ಮಟ್ಟದಲ್ಲಿ ಹಮ್ಮಿಕೊಳ್ಳಲು ರೂಪುರೇಷೆಯನ್ನು ಸಿದ್ಧಪಡಿಸಲಾಗಿದೆ. ಜೂ.8ರಿಂದ ಜನ್ಮಶತಮಾನೋತ್ಸವ ವರ್ಷಾಚರಣೆಯ ಪ್ರಯುಕ್ತ 100 ಸರಣಿ ಕಾರ್ಯಕ್ರಮಗಳನ್ನು ದೇಶದ ಬೇರೆ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯದ ಕನ್ನಡ, ತುಳುವಿಭಾಗ, ಶಾಲಾ ಕಾಲೇಜುಗಳಲ್ಲಿ ಸಾಹಿತ್ಯೋತ್ಸವ ಸರಣಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಜನ್ಮಶತಮಾನೋತ್ಸವ ನೆನಪಿಗಾಗಿ ಸಂಗ್ರಾಹ್ಯ ಸ್ಮರಣ ಸಂಚಿಕೆಯನ್ನು ಪ್ರಕಟಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಕಾರ್ಯಕ್ರಮಗಳನ್ನು ಕಾಸರಗೋಡು ಬದಿಯಡ್ಕ ಕವಿತಾ ಕುಟೀರದಲ್ಲಿ 100ನೇ ವರ್ಷದ ಹುಟ್ಟು ಹಬ್ಬವನ್ನು 8 ಜೂನ್‌ರಂದು ಬೆ. 10ರಿಂದ ಸಂಜೆ 5 ಗಂಟೆ ತನಕ ಏರ್ಪಡಿಸಲಾಗಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು (ಮೊ. 944 8572016) ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement