ದುಬೈ : ನವೆಂಬರ್ 14, ವಿಶ್ವ ಮಧುಮೇಹ ದಿನದ ಅಂಗವಾಗಿ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ದುಬೈ ಝೋನ್ ಸಾಂತ್ವನ ವಿಭಾಗದ ವತಿಯಿಂದ ನವೆಂಬರ್ 13ರಂದು ಆರೋಗ್ಯ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಶುಕ್ರವಾರ ಸಂಜೆ 06:15 ಕ್ಕೆ ದುಬೈ ಐಸಿಎಫ್ ಸೆಂಟರ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಸ್.ಎಸ್.ಎಫ್ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಎಂ ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಸಿಎಫ್ ಸಾಂತ್ವನ ವಿಭಾಗದ ಅಧ್ಯಕ್ಷ ಅಬ್ದುಲ್ಲ ಮುಸ್ಲಿಯಾರ್ ಕುಡ್ತಮುಗರು ರವರ ಅಧ್ಯಕ್ಷತೆ ವಹಿಸಲಿದ್ದಾರೆ.
ನಂತರ ರಾತ್ರಿ 9 ಕ್ಕೆ ನಡೆಯುವ ದ್ವಿತೀಯ ಹಂತದ ಕಾರ್ಯಕ್ರಮವನ್ನು ಕೆಸಿಎಫ್ ಅಂತಾರಾಷ್ಟ್ರ ಸಮಿತಿಯ ಉಪಾಧ್ಯಕ್ಷ ಎಂ.ಎಸ್.ಎಂ ಅಬ್ದುರ್ರಶೀದ್ ಸಖಾಫಿ ಝೈನಿ ಅಲ್ ಕಾಮಿಲ್ ಅವರು ಉದ್ಘಾಟಿಸಲಿದ್ದು, ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು ಅಧ್ಯಕ್ಷತೆ ವಹಿಸಲಿದ್ದಾರೆ.