ನಿಖಿಲ್ ಕುಮಾರಸ್ವಾಮಿ 
ಸುದ್ದಿಗಳು

ಫಲಿಸದ ತಾಯಿಯ ಕ್ಷೇತ್ರ ತ್ಯಾಗ: ತಂದೆಯ ಭದ್ರಕೋಟೆಯಲ್ಲೇ ಸೋತ ಮಗ; ಎಲ್ಲಿಯೂ ಸಲ್ಲದ ನಿಖಿಲ್ ಕುಮಾರಸ್ವಾಮಿ!

ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

ರಾಮನಗರ: ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಇದೀಗ ಮಗನಿಗಾಗಿ ತಾಯಿ ಮಾಡಿದ ತ್ಯಾಗ ಫಲಿಸಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಿಂದ  ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಳಪತಿಯ ಕುಡಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧಿಸಿದ್ದರು

ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel