ಸುದ್ದಿಗಳು

ಕರ್ನಾಟಕ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭವಾಗುತ್ತಿದ್ದಂತೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ

Ramyashree GN

ನವದೆಹಲಿ: 224 ಸದಸ್ಯರ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರು ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕೇಂದ್ರ ಕಚೇರಿಯಲ್ಲಿ ಡೋಲು ಮತ್ತು ತಮಟೆ ಭಾರಿಸುತ್ತಾ ಪಂಜಾಬಿ ಹಾಡುಗಳಿಗೆ ಕುಣಿಯುತ್ತಿರುವುದು ಕಂಡುಬಂತು.

ಪಕ್ಷದ ಮುಖಂಡರು ಪಕ್ಷದ ಪ್ರಧಾನ ಕಚೇರಿಯ ಹೊರಗೆ ವಿಶೇಷ ಪೂಜೆ ಸಲ್ಲಿಸಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಹಾರೈಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಘೋಷಣೆಗಳನ್ನು ಕೂಗಿದರು.

ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಮತದಾನ ನಡೆದಿತ್ತು. ದಕ್ಷಿಣದ ರಾಜ್ಯದಲ್ಲಿ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸೋನಿಯಾ ಗಾಂಧಿಯವರೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಆಕ್ರಮಣಕಾರಿಯಾಗಿ ಪ್ರಚಾರ ನಡೆಸಿತ್ತು.
ದಕ್ಷಿಣದ ರಾಜ್ಯದಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಂಡು, ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ.

SCROLL FOR NEXT