ಹೆಚ್.ಡಿ.ಕುಮಾರಸ್ವಾಮಿ 
ಸುದ್ದಿಗಳು

ಚನ್ನಪಟ್ಟಣ ವಿಧಾನಸಭಾ ಚುನಾವಣೆ ಫಲಿತಾಂಶ: ಸಿ.ಪಿ ಯೋಗೇಶ್ವರ್‌ ಹಿಂದಿಕ್ಕಿ ಹೆಚ್'ಡಿ.ಕುಮಾರಸ್ವಾಮಿ ಮುನ್ನಡೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಭರದಿಂದ ಮುಂದುವರೆದಿದ್ದು, ಬೆಳಗ್ಗೆ 10:30ರ ವೇಳೆಗೆ ಜೆಡಿಎಸ್‌ ಅಭ್ಯರ್ಥಿ ಕುಮಾರಸ್ವಾಮಿ 14,400 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಭರದಿಂದ ಮುಂದುವರೆದಿದ್ದು, ಬೆಳಗ್ಗೆ 10:30ರ ವೇಳೆಗೆ ಜೆಡಿಎಸ್‌ ಅಭ್ಯರ್ಥಿ ಕುಮಾರಸ್ವಾಮಿ 14,400 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬೆಳಗ್ಗೆ 9:03 ಸಮಯಕ್ಕೆ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಮುನ್ನಡೆ ಸಾಧಿಸಿದ್ದು, ಜೆಡಿಎಸ್‌ ಅಭ್ಯರ್ಥಿ ಕುಮಾರಸ್ವಾಮಿಗೆ ಹಿನ್ನಡೆಯಾಗಿತ್ತು. ಇದೀಗ ಕುಮಾರಸ್ವಾಮಿಯವರು ಮುನ್ನಡೆ ಸಾಧಿಸಿದ್ದಾರೆ.

ಗೊಂಬೆ ನಾಡು ಚನ್ನಪಟ್ಟಣ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದು, ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರಾ ನೇರ ಪೈಪೋಟಿ ಇದೆ. ಈ ಬಾರಿ ಕಾಂಗ್ರೆಸ್ ಗಂಗಾಧರ್ ಅವರನ್ನು ಕಣಕ್ಕಿಳಿಸಿದ್ದು, ಪ್ರಭಾವಿ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಪಿಯೋಗೇಶ್ವರ್ ಅವರನ್ನು ಎದುರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT