ಸುದ್ದಿಗಳು

ಕರ್ನಾಟಕ ವಿಧಾನಸಭೆ ಚುನಾವಣೆ: ಪಕ್ಷ ಬೇರೆಯಾದ್ರೂ ಗೆದ್ದು ಬೀಗಿದ ಅಪ್ಪ-ಮಕ್ಕಳು!

Shilpa D

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಪ್ರತಿ ವಿಧಾನಸಭೆ ಚುನಾವಣೆಯಂತೆ ಈ ಬಾರಿಯ ಚುನಾವಣೆಯಲ್ಲಿಯೂ ಮೂರು ಪಕ್ಷಗಳಲ್ಲಿ ಅಪ್ಪ-ಮಕ್ಕಳು ಸ್ಪರ್ಧಿಸಿದ್ದರು. ಅವರಲ್ಲಿ ಹಲವು ಮಂದಿ ಗೆಲುವು ಕಂಡಿದ್ದಾರೆ.

ಕಾಂಗ್ರೆಸ್​ನಿಂದ ಟಿಕೆಟ್​ ಪಡೆದಿದ್ದ ನಾಲ್ಕು ಅಪ್ಪ-ಮಕ್ಕಳ ಜೋಡಿ ಜಯ ಸಾಧಿಸಿದೆ.  ಲಿಂಗಾಯತ ಪ್ರಬಲ ನಾಯಕರಾದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣದಲ್ಲಿ ಜಯ ಸಾಧಿಸಿದರೆ, ಮಗ ಎಸ್​ಎಸ್​ ಮಲ್ಲಿಕಾರ್ಜುನ ಉತ್ತರ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. ಮಲ್ಲಿಕಾರ್ಜುನ 78,345 ಮತಗಳನ್ನು ಪಡೆಯುವ ಗೆಲುವು ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣದಲ್ಲಿ ತಂದೆ ಶಾಮನೂರು ಶಿವಶಂಕರಪ್ಪ 83,839 ಅವರು ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ.

ಬೆಂಗಳೂರಿನ ವಿಜಯ ನಗರದಲ್ಲಿ ಕ್ಷೇತ್ರದಲ್ಲಿ ಟಿಕೆಟ್ ಪಡೆದಿದ್ದ ಕೃಷ್ಣಪ್ಪ ಗೆಲುವು ಸಾಧಿಸಿದ್ದರೆ, ಮಗ ಪ್ರಿಯಕೃಷ್ಣ ಗೋವಿಂದ ರಾಜ ನಗರದಲ್ಲಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್​ನ ಹಿರಿಯ ನಾಯಕ ಕೆಎಚ್​ ಮುನಿಯಪ್ಪ ದೇವನಹಳ್ಳಿ ಕ್ಷೇತ್ರದಲ್ಲಿ ಅವರ ಮಗಳು ರೂಪ ಕಲಾ ಶಶಿಧರ್​ ಕೆಜಿಎಫ್​ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್​ ಹಿರಿಯ ನಾಯಕ ರಾಮಲಿಂಗ ರೆಡ್ಡಿ ಬಿಟಿಎಂ ಲೇಔಟ್​ನಲ್ಲಿ ಹಾಗೂ ಅವರು ಮಗಳು ಜಯ ನಗರದಲ್ಲಿ ಜಯ ಸಾಧಿಸಿದ್ದಾರೆ.

ಜೆಡಿಎಸ್​ನಿಂದ ಟಿಕೆಟ್​ ಪಡೆದಿದ್ದ ಜಿಟಿ ದೇವೇಗೌಡ ಹಾಗೂ ಮಗ ಹರೀಶ್ ಗೌಡ ಭರ್ಜರಿ ಜಯ ಸಾಧಿಸಿದ್ದಾರೆ.  ಹಾಸನ ಜಿಲ್ಲೆಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಎ.ಮಂಜು ಜೆಡಿಎಸ್‌ನಿಂದ ಹಾಗೂ ಕೊಡಗು ಜಿಲ್ಲೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದಿಂದ ಅವರ ಪುತ್ರ ಮಂಥರ್ ಗೌಡ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

SCROLL FOR NEXT