ಸಾಂದರ್ಭಿಕ ಚಿತ್ರ 
ಸುದ್ದಿಗಳು

ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ

ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ. 

ಹುಬ್ಬಳ್ಳಿ: ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ. ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ಜಗದೀಶ್ ಶೆಟ್ಟರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದಾರೆ.

ಹುಬ್ಬಳ್ಳಿ ಜನಸಂಘಕ್ಕೆ ದಕ್ಷಿಣ ಭಾರತದಲ್ಲಿ ಮೊದಲ ಕ್ಷೇತ್ರವಾಗಿದ್ದು, ಜಗದೀಶ್ ಶೆಟ್ಟರ್ ಅವರ ಚಿಕ್ಕಪ್ಪ ಸದಾಶಿವ ಶೆಟ್ಟರ್ 1968 ರಲ್ಲಿ ಮೊದಲ ಬಾರಿಗೆ ಅಲ್ಲಿಂದ ಗೆಲುವು ಸಾಧಿಸಿದ್ದರು. ಹುಬ್ಬಳ್ಳಿಯ ಮೇಯರ್ ಆಗಿದ್ದ ಜಗದೀಶ್ ಶೆಟ್ಟರ್ ಅವರ ತಂದೆ ಶಿವಪ್ಪ ಶೆಟ್ಟರ್ ದಕ್ಷಿಣ ಭಾರತದಲ್ಲಿ ಜನಸಂಘದಿಂದ ಮೊದಲ ಮೇಯರ್ ಆಗಿದ್ದರು.

ಹುಬ್ಬಳ್ಳಿ-ಧಾರವಾಡ ಕ್ಷೇತ್ರವು ಪ್ರಬಲ ಬಿಜೆಪಿ, ಆರ್‌ಎಸ್‌ಎಸ್ ಭದ್ರಕೋಟೆಯಾಗಿದ್ದು, ಈ ಭಾಗದಲ್ಲಿ ಆ ಪಕ್ಷವನ್ನು ಅಸ್ಥಿರಗೊಳಿಸುವುದು ಕಷ್ಟವಾಗಿತ್ತು.

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮುನ್ನಡೆ ಸಾಧಿಸಿದ್ದಾರೆ. ಕೇಸರಿ ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದ ನಂತರ, ಸವದಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಿದ್ದರು.

ಬೆಳಗಾವಿ, ಉತ್ತರ ಕನ್ನಡ, ಗದಗ, ಹಾವೇರಿ, ಬಾಗಲಕೋಟ, ವಿಜಯಪುರ, ಧಾರವಾಡದ ಹಲವು ಕ್ಷೇತ್ರಗಳಲ್ಲಿ ಶೆಟ್ಟರ್ ಎಫೆಕ್ಟ್ ಕಾಂಗ್ರೆಸ್‌ಗೆ ಕೆಲಸ ಮಾಡಿದಂತಿದ್ದು, ಈ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಹಿಂದೆ ಬಿದ್ದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT