ಪಿಎಂ ನರೇಂದ್ರ ಮೋದಿ 
ಸುದ್ದಿಗಳು

ಕರ್ನಾಟಕ ಚುನಾವಣೆ ಫಲಿತಾಂಶ: ಜನರು ಬಿಜೆಪಿ- ಪ್ರಧಾನಿ ಮೋದಿಯನ್ನು ತಿರಸ್ಕರಿಸಿದ್ದಾರೆ; ಕಾಂಗ್ರೆಸ್ ನಾಯಕರು

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಪ್ರವೃತ್ತಿಯನ್ನು ಅನುಸರಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. 

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಪ್ರವೃತ್ತಿಯನ್ನು ಅನುಸರಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. 

ಸುದ್ದಿಸಂಸ್ಥೆ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಬಿಜೆಪಿಯ 'ನಕಾರಾತ್ಮಕ' ಪ್ರಚಾರವನ್ನು ಜನರು ತಿರಸ್ಕರಿಸಿದ್ದಾರೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನೂ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಬರಲಿದ್ದೇವೆ ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ ಐಎಎನ್‌ಎಸ್‌ ಜೊತೆ ಮಾತನಾಡಿ, 'ನಮ್ಮ ತಪ್ಪುಗಳಿಂದ ನಾವು ಪಾಠ ಕಲಿತಿದ್ದೇವೆ... ಕೆಲವು ತಿಂಗಳ ಹಿಂದೆ ಹಿಮಾಚಲ ಪ್ರದೇಶದ ಫಲಿತಾಂಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯ ಇತ್ತೀಚಿನ ಟ್ರೆಂಡ್‌ಗಳು ಜನರ ಸಮಸ್ಯೆಗಳು ಬಗೆಹರಿಯುತ್ತಿಲ್ಲ ಎಂಬುದನ್ನು ತೋರಿಸುತ್ತವೆ. ಹೀಗಾಗಿ, ಅವರು ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ತಿಳಿಸಿದರು.

ಸರ್ವಜ್ಞನಗರದ ಕಾಂಗ್ರೆಸ್ ಅಭ್ಯರ್ಥಿ ಕೆಜೆ ಜಾರ್ಜ್ ಸುದ್ದಿಸಂಸ್ಥೆ ಎಎನ್ಐ ಜೊತೆ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆ ಸಾಧಿಸಿರುವುದಕ್ಕಾಗಿ, ಮತದಾರರಿಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT