ಎಂಪಿ ರೇಣುಕಾಚಾರ್ಯ 
ಸುದ್ದಿಗಳು

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾ ಚಾರ್ಯ

ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ  ಅವರು ನಿರ್ಧಾರ ಕೈಗೊಂಡಿದ್ದಾರೆ.

ದಾವಣಗೆರೆ: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ  ಅವರು ನಿರ್ಧಾರ ಕೈಗೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುವುದಾಗಿ ಸ್ಪಷ್ಪಪಡಿಸಿದ್ದಾರೆ. 

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ 80,624 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಿ.ಜಿ. ಶಾಂತನಗೌಡ 76,391 ಮತಗಳನ್ನು ಪಡೆದಿದ್ದರು. ಈ ಮೂಲಕ ಎಂಪಿ ರೇಣುಕಾಚಾರ್ಯ ಕೇವಲ 4233 ಮತಗಳಿಂದ ಗೆದ್ದಿದ್ದರು.  ಬಳಿಕ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿದ್ದರು. 

ಕೋವಿಡ್​ ಸಂದರ್ಭದಲ್ಲಿ ರೇಣುಕಾಚಾರ್ಯ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು. ಹೀಗಾಗಿ ಈ ಬಾರಿಯೂ ಗೆಲ್ಲುವ ವಿಶ್ವಾಸದಲ್ಲಿದ್ದರು. ಆದರೆ. ಈ ಬಾರಿ ಸೋತಿರುವುದರಿಂದ ಚುನಾವಣಾ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾದ CJP; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಬೀದಿ ನಾಯಿಯ ಭೀಕರ ದಾಳಿ: ಮನೆಯಿಂದ ಹೊರಗೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಗಂಭೀರ! Video