ಕಾಂಗ್ರೆಸ್ 
ಸುದ್ದಿಗಳು

ಕರ್ನಾಟಕ ವಿಧಾನಸಭೆ ಚುನಾವಣೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ಯಾರು? 

ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಸಂಭ್ರಮಿಸಿದೆ. ಕಲ್ಯಾಣ ಕರ್ನಾಟಕವು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಏಳು ಜಿಲ್ಲೆಗಳನ್ನು ಒಳಗೊಂಡಿದೆ.

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಸಂಭ್ರಮಿಸಿದೆ. ಕಲ್ಯಾಣ ಕರ್ನಾಟಕವು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಏಳು ಜಿಲ್ಲೆಗಳನ್ನು ಒಳಗೊಂಡಿದೆ.

ಆದಾಗ್ಯೂ, ಬಿಜೆಪಿಯು ಕೇವಲ 10 ಸ್ಥಾನಗಳನ್ನು ಪಡೆಯುವ ಮೂಲಕ ಕಲ್ಯಾಣ ಕರ್ನಾಟಕದಲ್ಲಿ ತನ್ನ ಪ್ರಾಬಲ್ಯ ಕಳೆದುಕೊಂಡಿದೆ. 2018 ರಲ್ಲಿ 19 ಸ್ಥಾನಗಳನ್ನು ಬಿಜೆಪಿ ಪಡೆದಿತ್ತು. 2018ರಲ್ಲಿ 18 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್, ಈ ಬಾರಿ 26 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಕಲ್ಯಾಣ ಕರ್ನಾಟಕವನ್ನು ವಶಪಡಿಸಿಕೊಳ್ಳುವುದು ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು.

ಫಲಿತಾಂಶ ಪ್ರಕಟವಾಗುವವರೆಗೂ ‘ಕಿಂಗ್‌ ಮೇಕರ್‌’ ಎಂದೇ ಬಿಂಬಿಸಿಕೊಂಡಿದ್ದ ಜೆಡಿಎಸ್‌ 2018ಕ್ಕೆ ಹೋಲಿಸಿದರೆ ಈ ಬಾರಿ 3 ಸ್ಥಾನಗಳೊಂದಿಗೆ ಒಂದು ಸ್ಥಾನವನ್ನು ಕಳೆದುಕೊಂಡಿದೆ.

ಬಿಜೆಪಿ ಜೊತೆಗಿನ ಸಂಬಂಧ ಕಡಿದುಕೊಂಡು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದ ಗಣಿ ಉದ್ಯಮಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಗೆದ್ದಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಸ್ವತಂತ್ರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.

ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಜೆಪಿ ಖಾತೆ ತೆರೆಯಲು ವಿಫಲವಾಗಿದೆ. 2018ರಲ್ಲಿ ಎರಡೂ ಜಿಲ್ಲೆಗಳಲ್ಲಿ ತಲಾ 2 ಸ್ಥಾನ ಗೆದ್ದಿತ್ತು.

ಕಲಬುರಗಿಯಲ್ಲಿ ಕೇಸರಿ ಪಕ್ಷದ ಬಲ 5 ರಿಂದ 2 ಕ್ಕೆ ಮತ್ತು ಕೊಪ್ಪಳ ಜಿಲ್ಲೆಯಲ್ಲಿ 3 ರಿಂದ 1 ಕ್ಕೆ ಕುಸಿದಿದೆ. ವಿಜಯನಗರದಲ್ಲಿ 2 ಸ್ಥಾನದಿಂದ 1ಕ್ಕೆ ಇಳಿದಿದೆ. ರಾಯಚೂರಿನಲ್ಲಿ 2 ಸ್ಥಾನ ಉಳಿಸಿಕೊಂಡಿದೆ. ಆದರೆ, ಬೀದರ್‌ನಲ್ಲಿ ಪಕ್ಷವು 4 ಸ್ಥಾನಗಳನ್ನು ಗಳಿಸಿದೆ. 2018ಕ್ಕೆ ಹೋಲಿಸಿದರೆ 2 ಸ್ಥಾನ ಹೆಚ್ಚಾಗಿದೆ.

ಕಲಬುರಗಿಯಲ್ಲಿ ರೈಲ್ವೆ ವಿಭಾಗ ಸ್ಥಾಪಿಸದಿರುವುದು, ರಾಯಚೂರಿಗೆ ಏಮ್ಸ್ ಮಂಜೂರು ಮಾಡದಿರುವುದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಸಾಕಷ್ಟು ಹಣ ನೀಡದಿರುವುದು, ಕಲಬುರಗಿಯಲ್ಲಿ ಪಿಎಸ್‌ಐ ನೇಮಕಾತಿ ಹಗರಣ ಸೇರಿದಂತೆ ಎಲ್ಲ ವಿಷಯಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಈ ಪ್ರದೇಶವನ್ನು ನಿರ್ಲಕ್ಷಿಸಲಾಗಿದೆ ಎಂದು ರಾಜಕೀಯ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್‌ನ 40% ಕಮಿಷನ್ ಆರೋಪಗಳು ಬಿಜೆಪಿಗೆ ಮಾರಕವಾಗಿ ಪರಿಣಮಿಸಿದೆ.

ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಅನುಭವಿ ನಾಯಕ ಈ ಪ್ರದೇಶದಿಂದ ಬಂದಿದ್ದರಿಂದ ಸಮೃದ್ಧ ಲಾಭವನ್ನು ಕಾಂಗ್ರೆಸ್ ಗಳಿಸಿತು. ಬೀದರ್ ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರ ಹುಮನಾಬಾದ್ ಭೇಟಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಗೆ ಭೇಟಿ ನೀಡಿರುವುದು ಪಕ್ಷಕ್ಕೆ ಸಹಾಯ ಮಾಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT