ಚಿತ್ರದುರ್ಗ: ಲಾರಿ-ಕಾರು ಮುಖಾಮುಖಿ ಡಿಕ್ಕಿ, 5 ಸಾವು
ಮೊಣಕಾಲ್ಮೂರಿನ ಬೀಜಿ ಕೆರೆಯ ಬಳಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ...
ಚಿತ್ರದುರ್ಗ: ಮೊಣಕಾಲ್ಮೂರಿನ ಬೀಜಿ ಕೆರೆಯ ಬಳಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಬಳ್ಳಾರಿಯ ಕಡೆ ಹೋಗುತ್ತಿದ್ದ ಕಾರು ಮತ್ತು ಬಳ್ಳಾರಿ ಕಡೆಯಿಂದ ಮೆಣಸಿನಕಾಯಿ ತುಂಬಿಕೊಂಡು ಬೆಂಗಳೂರಿನ ಕಡೆ ಆಗಮಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಡಿಕ್ಕಿ ಸಂಭವಿಸಿದೆ.
ಕಾರು ಚಾಲಕ ಶ್ರೀರಾಮು ಸೇರಿ ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡೂ ವಾಹನಗಳ ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೊಣಕಾಲ್ಮೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.