ರಾಜ್ಯ

ಖೈದಿಗಳಿಗೆ ಕಿರುಕುಳ ನೀಡುತ್ತಿರುವ ಪುನರ್ವಸತಿ ಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ

Srinivas Rao BV

ಬೆಂಗಳೂರು: ನಗರದಲ್ಲಿರುವ ಎರಡು ಪುನರ್ವಸತಿ ಕೇಂದ್ರಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿರುವ ಕಿರುಕುಳದ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ನೀಡಿರುವ ವರದಿಯನ್ನು ಆಧರಿಸಿ ಪುನರ್ವಸತಿ ಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಆದೇಶದ ಮೂಲಕ ಪುನರ್ವಸತಿ ಕೇಂದ್ರಗಳಲ್ಲಿ ಖೈದಿಗಳಿಗೆ ನೀಡುತ್ತಿರುವ ಹಿಂಸೆಯ ಬಗ್ಗೆ ಎಸ್ ನವೀನ್ ಕುಮಾರ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ, ನ್ಯಾ.ರವಿ ಮಳಿಮಠ್ ಅವರ ವಿಭಾಗೀಯ ಪೀಠ ಇತ್ಯರ್ಥಗೊಳಿಸಿde. ಯಾವುದೇ ವ್ಯಸನಗಳಿಲ್ಲದ ವ್ಯಕ್ತಿಗಳನ್ನು ವ್ಯಸನ ಮುಕ್ತ ಕೇಂದ್ರಕ್ಕೆ ಕರೆತಂದು ಕಿರುಕುಳ ನೀಡಲಾಗುತ್ತಿದೆ ಎಂದು ವಿಚಾರಣೆ ವೇಳೆ ಪಿಐಎಲ್ ದೂರು ದಾರರ ಪರ ವಕೀಲ ಬ್ರಿಜೇಶ್ ಸಿಂಗ್ ವಾದಿಸಿದ್ದರು.
ಪುನರ್ವಸತಿ ಕೇಂದ್ರಗಳಾದ ಸ್ಮೈಲ್ ಸೋಶಿಯಲ್ ಸರ್ವಿಸ್ ಸೊಸೈಟಿ, ಶ್ರೀ ಸಂತೋಶ್ ಸೋಶಿಯಲ್ ಸರ್ವಿಸ್ ಸೊಸೈಟಿ ಮಾಲಿಕರ ವಿರುದ್ಧ ಪಿಐಎಲ್ ಸಲ್ಲಿಸಿದ್ದ ನವೀನ್ ಕುಮಾರ್, ಪುನರ್ವಸತಿ ಕೇಂದ್ರಕ್ಕೆ ಬರುವವರಿಗೆ ಮೂಲಭೂತ ಸೌಲಭ್ಯಗಳು ಇಲ್ಲದಿರುವುದಷ್ಟೇ ಅಲ್ಲದೇ ಕಿರುಕುಳ ನೀಡಲಾಗುತ್ತಿದೆ ಎಂದು ಅರ್ಜಿಯಲಿ ಆರೋಪಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಈ ಬಗ್ಗೆ ವರದಿ ನೀಡುವಂತೆ ರಾಜ್ಯ ಮಾನವಹಕ್ಕು ಆಯೋಗಕ್ಕೆ ಸೂಚನೆ ನೀಡಿತ್ತು. ಮಾನವ ಹಕ್ಕು ಆಯೋಗದ ವರದಿಯನ್ನು ಪರಿಶೀಲಿಸಿರುವ ಹೈಕೋರ್ಟ್ ಪುನರ್ವಸತಿ ಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ಸೂಚನೆ ನೀಡಿದೆ.

SCROLL FOR NEXT