ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೆಡಿಎಸ್ ಮುಖಂಡರು 
ರಾಜ್ಯ

ರಾಜಕೀಯ ಬಣ್ಣ ಪಡೆದ ಸಿಗರನಹಳ್ಳಿ ದೇವಾಲಯ ವಿವಾದ

ಹೊಳೆನರಸೀಪುರ ತಾಲ್ಲೂಕು ಸಿಗರನಹಳ್ಳಿಯಲ್ಲಿ ದಲಿತರ ದೇವಾಲಯ ಪ್ರವೇಶ ವಿವಾದ ರಾಜಕೀಯ ಬಣ್ಣ...

ಹಾಸನ: ಹೊಳೆನರಸೀಪುರ ತಾಲ್ಲೂಕು ಸಿಗರನಹಳ್ಳಿಯಲ್ಲಿ ದಲಿತರ ದೇವಾಲಯ ಪ್ರವೇಶ ವಿವಾದ ರಾಜಕೀಯ ಬಣ್ಣ ಪಡೆದಿದೆ. 
ಸಿಗರನಹಳ್ಳಿಯ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಜಾತ್ರಾ ಉತ್ಸವದಲ್ಲಿ ಪಾಲ್ಗೊಳ್ಳಲು ದಲಿತರಿಗೆ ಅವಕಾಶ ಮಾಡಿಕೊಡದ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ದಲಿತರು ಮತ್ತು ಮೇಲ್ವರ್ಗವದವರ ನಡುವೆ ಘರ್ಷಣೆ ನಡೆದಿತ್ತು. ಘರ್ಷಣೆ ವೇಳೆ ಪೊಲೀಸರು 30 ಮಂದಿಯನ್ನು ಬಂಧಿಸಿದ್ದರು. 
ಈ ಸಂಬಂಧ ಜೆಡಿಎಸ್ ಶಾಸಕರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜು ರಾಜಿನಾಮೆ ನೀಡಬೇಕು ಮತ್ತು ಜಿಲ್ಲಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. 
ಶಾಸಕ ಎಚ್ ಡಿ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಏಪ್ರಿಲ್ 1ರಂದು ಸಿಗರನಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೇ, ಅವರ ಮೇಲೆ ಕೊಲೆ ಯತ್ನ, ದರೋಡೆ ಮುಂತಾದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಬಂಧಿತರನ್ನು ಬಿಡುಗಡೆಗೊಳಿಸಿ, ದೂರುಗಳನ್ನು ಹಿಂಪಡೆಯಬೇಕು. ಘಟನೆ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕು ಎಂದು ರೇವಣ್ಣ ಒತ್ತಾಯಿಸಿದ್ದಾರೆ. 
ಎರಡು ದಲಿತ ಕುಟಂಬದವರನ್ನು ಬಿಟ್ಟರೆ ಉಳಿದವರೆಲ್ಲರೂ ಶಾಂತಿಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಒಬ್ಬ ಪತ್ರಕರ್ತ ಮತ್ತು ಸಚಿವರ ಹಿಂಬಾಲಕರೊಬ್ಬರು ಕೆಲವರ ಕುಮ್ಮಕ್ಕಿನಿಂದ ಗ್ರಾಮದ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್