ತುಮಕೂರು: ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಕೊರಟಗೆರೆ ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊರಟಗೆರೆ ತಾಲ್ಲೂಕಿನ ದೊಡ್ಡಬನಹಳ್ಳಿಯ ರಂಗನಾಥ(42) ಆತ್ಮಹತ್ಯೆ ಮಾಡಿಕೊಂಡ ರೈತ. ರಂಗನಾಥ್ 5 ಲಕ್ಷ ಸಾಲ ಮಾಡಿಕೊಂಡಿದ್ದರು.
ಮಳೆಯಾಗದೆ, ಜಮೀನು ಬರ ಭೂಮಿಯಾಗಿತ್ತು. ಕೃಷಿಗಾಗಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಆದರೆ, ಸಾಲ ತೀರಿಸಲಾಗದೆ ಮನನೊಂದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.