ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಜಾತಿಗಣತಿ ವರದಿ ಬಂದ ನಂತರ ದಲಿತರ ಒಳಮೀಸಲಾತಿ ಚರ್ಚೆ: ಸಿಎಂ

ಜಾತಿಗಣತಿ ವರದಿ ಪ್ರಕಟವಾದ ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ...

ಬೆಂಗಳೂರು: ಜಾತಿಗಣತಿ ವರದಿ ಪ್ರಕಟವಾದ ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
ಮಂಗಳವಾರ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 109ನೇ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ನ್ಯಾ.ಎ.ಜೆ ಸದಾಶಿವ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ಜಾತಿಗಣತಿ ಸರ್ವೆ ನಡೆದಿದೆ. ಸದ್ಯದಲ್ಲೇ ಈ ವರದಿ ಪ್ರಕಟವಾಗಲಿದೆ. ತದ ನಂತರ ರಾಜ್ಯದಲ್ಲಿ ಸಮುದಾಯದ ಜನಸಂಖ್ಯೆ ಎಷ್ಟಿದೆ ಎಂಬುದು ಸರ್ಕಾರದ ಗಮನಕ್ಕೆ ಬರುತ್ತದೆ. ಹಾಗಾಗಿ, ವರದಿ ಬಂದ ನಂತರ ಒಳಮೀಸಲಾತಿ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!