ಬೆಂಗಳೂರು: ನಗರದ ರೆಸಿಡೆನ್ಸಿ ರಸ್ತೆಯಲ್ಲಿರುವ ಚಾನ್ಸರಿ ಹೋಟೆಲ್ ನಲ್ಲಿ ಸೋಮವಾರ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಹೋಟೆಲ್ ಬೇಸ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ವಾಹನಗಳೊಂದಿಗೆ ಸ್ಥಳಕ್ಕಾಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ 11.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಹೋಟೆಲ್ ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಭಯಭೀತರಾದ ಹೋಟೆಲ್ ಸಿಬ್ಬಂದಿಗಳು ಹಾಗೂ ಗ್ರಾಹಕರು ಹೊರಬಂದಿದ್ದಾರೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಯಾವುದೇ ಸಾವು, ನೋವುಗಳ ಸಂಭವಿಸಿರುವುದಾಗಿ ವರದಿಗಳಾಗಿಲ್ಲ.