ಮೂರು ವರ್ಷಗಳಲ್ಲಿ ಕೊಂಕಣ ರೈಲು ಮಾರ್ಗ ಸಂಪೂರ್ಣ ವಿದ್ಯುತೀಕರಣ
ಮೂರು ವರ್ಷದೊಳಗೆ ಕೊಂಕಣ ರೈಲು ಮಾರ್ಗವನ್ನು ಸಂಪೂರ್ಣ ವಿದ್ಯುತೀಕರಣಗೊಳಿಸಲಾಗುವುದು ಎಂದು ಕೊಂಕಣ ರೈಲ್ವೆ ಕಾರ್ಪೊರೇಶನ್ ನಿಗಮದ ಅಧ್ಯಕ್ಷ ಸಂಜಯ್ ಗುಪ್ತಾ ತಿಳಿಸಿದ್ದಾರೆ.
ಮಂಗಳೂರು: ಮೂರು ವರ್ಷದೊಳಗೆ ಕೊಂಕಣ ರೈಲು ಮಾರ್ಗವನ್ನು ಸಂಪೂರ್ಣ ವಿದ್ಯುತೀಕರಣಗೊಳಿಸಲಾಗುವುದು ಎಂದು ಕೊಂಕಣ ರೈಲ್ವೆ ಕಾರ್ಪೊರೇಶನ್ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಗುಪ್ತಾ ತಿಳಿಸಿದ್ದಾರೆ.
ಸುಮಾರು 710 ಕೋಟಿ ರೂ ವೆಚ್ಚದಲ್ಲಿ ಕೊಂಕಣ ರೈಲು ಮಾರ್ಗವನ್ನು ಸಂಪೂರ್ಣವಾಗಿ ವಿದ್ಯುತೀಕರಿಸುವುದಕ್ಕೆ ಹಾಗೂ ಜೋಡಿ ಹಳಿ ಮಾರ್ಗವನ್ನಾಗಿ ಮಾರ್ಪಾಡು ಮಾಡುವ ಯೋಜನೆಯನ್ನು ನವೆಂಬರ್ ನಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಉದ್ಘಾಟಿಸಿದ್ದಾರೆ. ಜೋಡಿ ಹಳಿ ಮಾರ್ಗದ ಮೊದಲ ಹಂತದ ಕಾಮಗಾರಿ ಮೇ ನಿಂದ ಪ್ರಾರಂಭವಾಗಲಿದ್ದು 295 ಕೋಟಿ ರೂ ವೆಚ್ಚವಾಗಲಿದೆ ಎಂದು ಸಂಜಯ್ ಗುಪ್ತಾ ತಿಳಿಸಿದ್ದಾರೆ.
ಕೊಂಕಣ ರೈಲು ಮಾರ್ಗವನ್ನು ಸಂಪೂರ್ಣ ಜೋಡಿ ಹಳಿ ಮಾರ್ಗವನ್ನಾಗಿಸುವ ಬಗ್ಗೆ ಮುಂದಿನ ಸಭೆಯಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಸಂಜಯ್ ಗುಪ್ತಾ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.