ಆತ್ಮಹತ್ಯೆ 
ರಾಜ್ಯ

ಮಾನಸಿಕ ಖಿನ್ನತೆ: ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮುಂಬೈ ಮೂಲದ ಟೆಕ್ಕಿ ಅಂಕಿತ ಸೋನಿ ಎಂಬುವರು ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ...

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮುಂಬೈ ಮೂಲದ ಟೆಕ್ಕಿ ಅಂಕಿತ ಸೋನಿ ಎಂಬುವರು ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಮಾರತಹಳ್ಳಿ ಬಳಿಯ ಪೂರ್ವ ಫೌಂಟೈನ್ ಸ್ಕೈರ್ ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಅಂಕಿತ ಸೋನಿ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಂಕಿತ ಸಾವನ್ನಪ್ಪಿದ್ದಾರೆ. ಸದ್ಯ ಸೋನಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇಡಲಾಗಿದೆ.
ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಂಕಿತ ಸೋನಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ರಾತ್ರಿ ಸೋನಿ ಅವರು ತನ್ನ ಸ್ನೇಹಿತೆ ಮನೆಯಲ್ಲಿ ತಂಗಿದ್ದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP