ಮೃತ ಅರುಣ್ ಕುಮಾರ್ (ಚಿತ್ರ: ಟಿಎನ್ ಐಇ) 
ರಾಜ್ಯ

ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಭಗ್ನ ಪ್ರೇಮಿಯ ಆತ್ಮಹತ್ಯೆ

ಪ್ರೀತಿಯಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು: ಪ್ರೀತಿಯಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವೀವರ್ಸ್ ಕಾಲನಿ ನಿವಾಸಿ ಅರುಣ್‌ಕುಮಾರ್ (25) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಆತ್ಮಹತ್ಯೆಗೆ ಯುವತಿ ಹಾಗೂ ಆಕೆ ಸಂಬಂಧಿಕರು ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಆತ್ಮಹತ್ಯೆಗೆ ಕಾರಣರಾದ ಯುವತಿ ಫೋಷಕರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮೃತನ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದಾರೆ. ಮೃತ ಅರುಣ್ ಕುಮಾರ್ ಆತ್ಮಹತ್ಯೆಗೂ ಮುನ್ನ ತನ್ನ ಪ್ರೇಮ ವೈಫಲ್ಯ ಹಾಗೂ ಯುವತಿ ಸಂಬಂಧಿಗಳು ನೀಡಿದ ಕಿರುಕುಳದ ಬಗ್ಗೆ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿ ಫೆಸ್‌ಬುಕ್‌ಗೆ ಅಪ್‌ಲೋಡ್ ಮಾಡಿದ್ದಾನೆ.

ಮೃತ ಅರುಣ್ ತನ್ ಮನೆಯ ಸಮೀಪದಲ್ಲೇ ವಾಸವಿದ್ದ ಯುವತಿಯನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ, ಇದಕ್ಕೆ ಯುವತಿಯ ಪೋಷಕರ ವಿರೋಧವಿತ್ತು. ಹೀಗಾಗಿ ತಮ್ಮ ಮಗಳಿಗೆ   ಅರುಣ್ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಮೈಕೋ ಲೇಔಟ್ ಠಾಣೆಗೆ ದೂರು ನೀಡಿದ್ದರು. ಇದರಿಂದ ಬೇಸತ್ತ ಅರುಣ್, ಪ್ರೀತಿಸಿದ ಯುವತಿ ತನಗೆ ಸಿಗುವುದಿಲ್ಲ ಎಂಬುದು  ಸ್ಪಷ್ಟವಾಗುತ್ತಿದ್ದಂತೆಯೇ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನು ಆತ್ಮಹತ್ಯೆಗೂ ಮುನ್ನ ವಿಡಿಯೋ ಚಿತ್ರೀಕರಣ ಮಾಡಿ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿರುವ ಅರುಣ್, "ಇಷ್ಟು ದಿನ ನನ್ನ ಜತೆ ಓಡಾಡಿದ ನಿನಗೆ ಈಗ ನಾನು ಬೇಡವಾಗಿದ್ದೇನೆ.  ಯಾವುದೇ ಕಾರಣಕ್ಕೂ ಪ್ರೀತಿಸಿ ಈ ರೀತಿ ಕೈ ಕೊಡಬೇಡಿ. ಯುವತಿಯ ಹತ್ತಿರದ ಸಂಬಂಧಿ ರೇಣುಕೇಶ್ ನನಗೆ ಕಿರುಕುಳ ನೀಡಿದ್ದ. ಹಲವು ಬಾರಿ ಹಲ್ಲೆ ಕೂಡ ಮಾಡಿಸಿದ್ದ. ಇದರಿಂದ  ಮನನೊಂದು ಆತ್ಮಹತ್ಯೆಗೆ ನಿರ್ಧರಿಸಿದ್ದೇನೆ. ಆದರೆ, ರೇಣುಕೇಶ್‌ನನ್ನು ಯಾವುದೇ ಕಾರಣಕ್ಕೂ ಬಿಡಬೇಡಿ. ಆತನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿಡಿಯೋದಲ್ಲಿ ಪೊಲೀಸರಲ್ಲಿ ಮನವಿ  ಮಾಡಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT